ಶಿವಮೊಗ್ಗ: ಹಾವೇರಿ ಜಿಲ್ಲೆ ಕಾಗಿನೆಲೆಯಲ್ಲಿ ಇದೇ 3ರಂದು ಬಿಜೆಪಿ ಹಮ್ಮಿಕೊಂಡಿರುವ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಊಟದ ವ್ಯವಸ್ಥೆ ಮಾಡದಂತೆ ಚುನಾವಣಾ ಆಯೋಗ ತಾಕೀತು ಮಾಡಿದೆ. ಇದು ಸರಿಯಲ್ಲ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಆಕ್ಷೇಪ ವ್ಯಕ್ತಪಡಿಸಿದರು.

ಸೋಮವಾರ (ಏ. 2) ಬೆಳಿಗ್ಗೆ 11ರ ಒಳಗೆ ಅನುಮತಿ ನೀಡದಿದ್ದರೆ ಹಾವೇರಿ ಜಿಲ್ಲಾ ಚುನಾವಣಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಲಾಗುವುದು ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದರು.

ಪಕ್ಷ ಹಾಗೂ ಅಭ್ಯರ್ಥಿಗಳಿಗೆ ಖರ್ಚು ಮಾಡಲು ಆಯೋಗವೇ ಮೊತ್ತ ನಿಗದಿ ಮಾಡಿದೆ. ಸಮಾವೇಶದ ವೆಚ್ಚವನ್ನು ಪಕ್ಷದ ಲೆಕ್ಕಕ್ಕೆ ಸೇರಿಸಿ, ಆಯೋಗಕ್ಕೆ ಸಲ್ಲಿಸಲಾಗುವುದು. ಹಾಗಾಗಿ, ಅನುಮತಿ ನೀಡಬೇಕು ಎಂದು ಈಶ್ವರಪ್ಪ ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.