ಬಳ್ಳಾರಿ: ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ಪ್ರವಾಸ ಸಂದರ್ಭದಲ್ಲಿ ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಪರಸ್ಪರ ಆರೋಪ-ಪ್ರತ್ಯಾರೋಪ ಮಾಡುತ್ತಿರುವುದರಿಂದ ಯಾವ ಪ್ರಯೋಜನವೂ ಇಲ್ಲ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಜಿಲ್ಲೆಯ ಕೂಡ್ಲಿಗಿಯಲ್ಲಿ ಜೆಡಿಎಸ್ ಬೃಹತ್ ಸಮಾವೇಶಕ್ಕೆ ಕುಮಾರಸ್ವಾಮಿ ಅವರು ಭಾನುವಾರ ಹೆಲಿಕಾಪ್ಟರ್ನಲ್ಲಿ ಬಂದಿಳಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ ವಿಚಾರಗಳ ಪ್ರಸ್ತಾಪ ಮಾಡದ ಅವರನ್ನು ಜನ ಬೆಂಬಲಿಸಬಾರದು ಎಂದರು.
ಹಿರೇಮಠ ಕಾಲೇಜು ಆವರಣದಲ್ಲಿ ಸಮಾವೇಶ ಆಯೋಜಿಸಲಾಗಿದೆ. ಸಾವಿರಾರು ಕಾರ್ಯಕರ್ತರ ಭಾಗವಹಿಸಿದ್ದಾರೆ.