ಚಿಕ್ಕಬಳ್ಳಾಪುರ: ಸರಳ ಬಹುಮತ ಇಲ್ಲದಿದ್ದರೂ ಬಿಜೆಪಿಗೆ ಸರ್ಕಾರ ರಚಿಸಲು ಅವಕಾಶ ನೀಡಿರುವ ರಾಜ್ಯಪಾಲ ವಜುಭಾಯಿ ವಾಲಾ ಅವರ ಕ್ರಮ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎನ್. ಕೇಶವರೆಡ್ಡಿ, ‘ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರು ಬಹುಮತ ಇರುವ ಮೈತ್ರಿಕೂಟಕ್ಕೆ ಸರ್ಕಾರ ರಚಿಸಲು ಅವಕಾಶ ನೀಡುವ ಬದಲು ಪ್ರಧಾನಿ ಮೋದಿ ಅವರ ಕೈಗೊಂಬೆಯಾಗಿ ವರ್ತಿಸಿ, ಸರಳ ಬಹುಮತ ಇಲ್ಲದಿದ್ದರೂ ಬಿಜೆಪಿಗೆ ಸರ್ಕಾರ ರಚಿಸಲು ಅವಕಾಶ ನೀಡಿರುವುದು ಅಕ್ಷಮ್ಯ, ಸಂವಿಧಾನಬಾಹಿರ ಕ್ರಮ’ ಎಂದು ಆರೋಪಿಸಿದರು.

‘ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಯಡಿಯೂರಪ್ಪ ಅವರಿಗೆ ಬಹುಮತ ಸಾಬೀತಿಗೆ 15 ದಿನಗಳ ಕಾಲಾವಕಾಶ ನೀಡಿರುವುದರ ಹಿಂದೆ ಬಿಜೆಪಿಗರಿಗೆ ಕುದುರೆ ವ್ಯಾಪಾರ ನಡೆಸಲು ಅವಕಾಶ ಮಾಡಿಕೊಡುವ ತಂತ್ರಗಾರಿಕೆ ಇದೆ. ರಾಜಕೀಯ ತೀರ್ಮಾನಗಳನ್ನು ಕೈಗೊಳ್ಳುವುದು ರಾಜ್ಯಪಾಲರ ಸ್ಥಾನದ ಘನತೆಗೆ ಅವಮಾನ ಮಾಡಿದಂತೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಚ್.ವಿ.ಮಂಜುನಾಥ್, ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಯಲುವಹಳ್ಳಿ ರಮೇಶ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.