ಲಖನೌ:ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಪದವಿ ಪೂರ್ಣಗೊಂಡಿಲ್ಲ ಎಂಬ ವಿಷಯ ಈಗ ದೃಢಪಟ್ಟಿದೆ. ಈ ಕುರಿತು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಇದೇ ಮೊದಲ ಬಾರಿಗೆ ಅವರು ಸ್ಪಷ್ಟಪಡಿಸಿದ್ದಾರೆ.

ಅಮೇಠಿ ಕ್ಷೇತ್ರದಲ್ಲಿಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧಬಿಜೆಪಿ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಸಿದ ಸ್ಮೃತಿ ಇರಾನಿ ಅವರು ಆಸ್ತಿ, ಸೊತ್ತು, ಶಿಕ್ಷಣಕ್ಕೆ ಸಂಬಂಧಿಸಿದ ಮಾಹಿತಿಯನ್ನು ಆಯೋಗಕ್ಕೆ ಸಲ್ಲಿಸಿದ್ದಾರೆ. ಉನ್ನತ ಶಿಕ್ಷಣದ ಮಾಹಿತಿ ತುಂಬಬೇಕಾದ ಜಾಗದಲ್ಲಿ ಅವರು, ‘ದೆಹಲಿ ಮುಕ್ತ ವಿಶ್ವವಿದ್ಯಾಲಯದಲ್ಲಿ (ಅಂಚೆ ತೆರಪಿನ) ವಾಣಿಜ್ಯ ಪದವಿ ಭಾಗ–1’ ಎಂದು ನಮೂದಿಸಿದ್ದು, 1994ರಲ್ಲಿ ಪದವಿಗೆ ಸೇರಿದ್ದಾಗಿ ಮಾಹಿತಿ ನೀಡಿದ್ದಾರೆ. ಜತೆಗೆ ಆವರಣದಲ್ಲಿ ‘ಮೂರು ವರ್ಷದ ಪದವಿ ಪೂರ್ಣಗೊಂಡಿಲ್ಲ’ ಎಂದೂ ಬರೆದಿದ್ದಾರೆ.

2004ರಲ್ಲಿ ದೆಹಲಿಯ ಚಾಂದನಿಚೌಕ್‌ನಲ್ಲಿ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ವಿರುದ್ಧ ಸ್ಪರ್ಧಿಸಿದ್ದ ಅವರುದೆಹಲಿ ಮುಕ್ತ ವಿಶ್ವವಿದ್ಯಾಲಯದಿಂದ (ಅಂಚೆ ತೆರಪಿನ) ಬಿ.ಎ. ಪದವಿ ಪಡೆದಿದ್ದಾಗಿ ಉಲ್ಲೇಖಿಸಿದ್ದರು.

ಈ ಬಾರಿ ₹4.71 ಕೋಟಿ ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿದ್ದಾರೆ.

ಯೋಗಿ ಸೇರಿ ಹಿರಿಯ ನಾಯಕರ ಸಾಥ್

ಉಮೇದುವಾರಿಕೆ ಸಲ್ಲಿಕೆಗೂ ಮುನ್ನ ಪೂಜೆ ಸಲ್ಲಿಸಿ, ರೋಡ್ ಶೋ ನಡೆಸಿದ ಸ್ಮೃತಿ ಅವರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಪಕ್ಷದ ಹಿರಿಯ ಮುಖಂಡರು, ಕಾರ್ಯಕರ್ತರು ಜತೆಯಾಗಿದ್ದರು.

‘ಅಮೇಠಿ ಅಭಿವೃದ್ಧಿಗೆ ರಾಹುಲ್ ಗಾಂಧಿ ಯಾವುದೇ ಕ್ರಮ ತೆಗೆದುಕೊಂಡಿಲ್ಲ’ ಎಂದು ವಾಗ್ದಾಳಿ ನಡೆಸಿದರು. ನೆಹರೂ ಮನೆತನದ ಭದ್ರಕೋಟೆಯಲ್ಲಿ ಈ ಬಾರಿ ಕಮಲ ಅರಳಿಸುವುದಾಗಿ ಎಂದು ಸ್ಮೃತಿ ವಿಶ್ವಾಸ ವ್ಯಕ್ತಪಡಿಸಿದರು.

2014ರ ಚುನಾವಣೆಯಲ್ಲಿ ರಾಹುಲ್ ವಿರುದ್ಧ ಒಂದು ಲಕ್ಷ ಮತಗಳಿಂದ ಸ್ಮೃತಿ ಸೋಲುಂಡಿದ್ದರು. ಹೀಗಿದ್ದರೂ ಕ್ಷೇತ್ರಕ್ಕೆ ಅವರು ನಿಯಮಿತವಾಗಿ ಭೇಟಿ ನೀಡುತ್ತಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.