ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಪ್ತದಳ ದುರುಪಯೋಗ: ಸಿ.ಎಂ ವಿರುದ್ಧ ದೂರು

Last Updated 27 ಮಾರ್ಚ್ 2019, 12:15 IST
ಅಕ್ಷರ ಗಾತ್ರ

ಮಂಡ್ಯ: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಮ್ಮ ಪುತ್ರ ನಿಖಿಲ್‌ ಅವರನ್ನು ಗೆಲ್ಲಿಸಿಕೊಳ್ಳಲು ರಾಜ್ಯ ಗುಪ್ತದಳದ ಸಿಬ್ಬಂದಿಯನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಆರ್‌ಟಿಐ ಕಾರ್ಯಕರ್ತ ಕೆ.ಆರ್‌.ರವೀಂದ್ರ ಗುರುವಾರ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌ ಅವರಿಗೆ ದೂರು ಸಲ್ಲಿಸಿದ್ದಾರೆ.

ಮಾರ್ಚ್‌ 26ರಂದು ಜಲ್ಲೆಯ ಎಲ್ಲಾ ಠಾಣೆಯಲ್ಲಿರುವ ಗುಪ್ತ ದಳದ ಸಿಬ್ಬಂದಿಯನ್ನು ತರಬೇತಿ ನೆಪದಲ್ಲಿ ಬೆಂಗಳೂರಿಗೆ ಕರೆಸಿಕೊಂಡಿದ್ದಾರೆ. ಬೆಂಗಳೂರಿಗೆ ಪೊಲೀಸ್‌ ಇಂಟೆಲಿಜೆನ್ಸ್‌ ಕಚೇರಿಯಲ್ಲಿ ಸಿಬ್ಬಂದಿಯೊಂದಿಗೆ ಮುಖ್ಯಮಂತ್ರಿಗಳು ಮಾತುಕತೆ ನಡೆಸಿದ್ದಾರೆ. ಪಕ್ಷೇತರ ಅಭ್ಯರ್ಥಿಯನ್ನು ಬೆಂಬಲಿಸುವ ಮುಖಂಡರ ಮೇಲೆ ನಿಗಾ ಇಡಬೇಕು ಎಂದು ಸೂಚನೆ ನೀಡಿದ್ದಾರೆ.

ಅಧಿಕಾರ ದುರುಪಯೋಗ ಮಾಡಿಕೊಂಡಿರುವ ಮುಖ್ಯಮಂತ್ರಿಗಳ ವಿರುದ್ಧ ಉನ್ನತ ಮಟ್ಟದ ತನಿಖೆ ನಡೆಯಬೇಕು. ಇದಕ್ಕೆ ಸಹಕಾರ ನೀಡಿರುವ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶಿವಪ್ರಕಾಶ್‌ ದೇವರಾಜ್‌, ಎಎಸ್‌ಪಿ ಬಲರಾಮೇಗೌಡ ಅವರನ್ನು ವರ್ಗಾವಣೆ ಮಾಡಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT