ಮತ್ತೊಂದು ದುರಂತ: ಯುವಕನಿಗೆ ತೀವ್ರ ಗಾಯ

ಬುಧವಾರ, ಜೂನ್ 19, 2019
25 °C

ಮತ್ತೊಂದು ದುರಂತ: ಯುವಕನಿಗೆ ತೀವ್ರ ಗಾಯ

Published:
Updated:

ಬೆಂಗಳೂರು: ಸುದ್ದಗುಂಟೆಪಾಳ್ಯದ ಭೋವಿ ಕಾಲೊನಿಯಲ್ಲಿ ಹೈ–ಟೆನ್ಶನ್ ವೈರ್ ತಗುಲಿ ರಮೇಶ್ (20) ಎಂಬುವರು ತೀವ್ರವಾಗಿ ಗಾಯಗೊಂಡಿದ್ದು, ಸೇಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳೀಯ ನಿವಾಸಿ ಮುನಿಯಪ್ಪ ಎಂಬುವರ ಪುತ್ರ ರಮೇಶ್, ಮನೆಯ ಮೇಲೆ ಒಣಗಲು ಹಾಕಿದ್ದ ಬೆಡ್‌ಶಿಟ್‌ ತೆಗೆದುಕೊಂಡು ಬರಲು ಹೋಗಿದ್ದಾಗ ಈ ಅವಘಡ ಸಂಭವಿಸಿದೆ.

‘ಮನೆಯ ಮೇಲೆಯೇ ಹೈ–ಟೆನ್ಶನ್ ವೈರ್ ಹಾದು ಹೋಗಿದೆ. ತೊಳೆದ ಬಟ್ಟೆಗಳನ್ನು ಮನೆಯ ಮೇಲೆ ಒಣಗಲು ಹಾಕಲಾಗುತ್ತದೆ. ಭಾನುವಾರ ಮಧ್ಯಾಹ್ನ 2.50ಕ್ಕೆ ಮನೆಯ ಮೇಲಿದ್ದ ಬೆಡ್‌ ತರಲೆಂದು ರಮೇಶ್ ಹೋಗಿದ್ದ ವೇಳೆಯಲ್ಲೇ ತಂತಿ ತಗುಲಿತ್ತು. ಸ್ಥಳದಲ್ಲೇ ಅವರು ಪ್ರಜ್ಞೆ ತಪ್ಪಿ ಬಿದ್ದಿದ್ದರು’ ಎಂದು ಸುದ್ದಗುಂಟೆಪಾಳ್ಯ ಪೊಲೀಸರು ಹೇಳಿದರು.

‘ಯುವಕನನ್ನು ಗಮನಿಸಿದ್ದ ಸ್ಥಳೀಯರು, ಮನೆಯ ಮೇಲೆ ಹೋಗಿ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ’ ಎಂದರು.

‘ಘಟನೆಯಿಂದ ರಮೇಶ್ ದೇಹದ ಶೇ 70ರಷ್ಟು ಭಾಗ ಸುಟ್ಟು ಹೋಗಿದೆ. ಅವರ ಸ್ಥಿತಿ ಚಿಂತಾಜನಕವಾಗಿರುವುದಾಗಿ ವೈದ್ಯರು ಹೇಳುತ್ತಿದ್ದಾರೆ. ಸಾವು– ಬದುಕಿನ ನಡುವೆ ಹೋರಾಡುತ್ತಿರುವ ಯುವಕನಿಗೆ ಮಾತನಾಡಲು ಸಹ ಸಾಧ್ಯವಾಗುತ್ತಿಲ್ಲ’ ಎಂದರು.

ಕೆಪಿಟಿಸಿಎಲ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌: ‘ಘಟನೆ ಬಗ್ಗೆ ದೂರು ನೀಡಿರುವ ರಮೇಶ್ ಅವರ ತಂದೆ ಮುನಿಯಪ್ಪ, ‘ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ (ಕೆಪಿಟಿಸಿಎಲ್) ಅಧಿಕಾರಿಗಳ ನಿರ್ಲಕ್ಷ್ಯದಿಂದ ಮಗನಿಗೆ ಈ ಸ್ಥಿತಿ ಬಂದಿದೆ. ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ’ ಎಂದು ಆಗ್ರಹಿಸಿದ್ದಾರೆ. ಅದರನ್ವಯ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ವಿವರಿಸಿದರು.  

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !