ಇಂಗ್ಲಿಷ್‌ ಮಾಧ್ಯಮ ಶಾಲೆಗಳಿಗೆ ಬೀಗ ಜಡಿದು ಪ್ರತಿಭಟನೆ

ಭಾನುವಾರ, ಜೂನ್ 16, 2019
28 °C

ಇಂಗ್ಲಿಷ್‌ ಮಾಧ್ಯಮ ಶಾಲೆಗಳಿಗೆ ಬೀಗ ಜಡಿದು ಪ್ರತಿಭಟನೆ

Published:
Updated:

ಬೆಂಗಳೂರು: ಇದೇ ಶೈಕ್ಷಣಿಕ ವರ್ಷದಿಂದ ಪ್ರಾರಂಭವಾಗಲಿರುವ ಸಾವಿರ ಇಂಗ್ಲಿಷ್‌ ಮಾಧ್ಯಮ ಶಾಲೆಗಳಿಗೆ ಬೀಗ ಜಡಿದು ಪ್ರತಿಭಟನೆ ನಡೆಸಲು ಕರ್ನಾಟಕ ನವನಿರ್ಮಾಣ ಸೇನೆ ತೀರ್ಮಾನಿಸಿದೆ.

‘ಇಂಗ್ಲಿಷ್‌ ಶಾಲೆಗಳನ್ನು ಆರಂಭ ಮಾಡಕೂಡದು ಎಂದು ಹಿಂದೆಯೂ ಸರ್ಕಾರಕ್ಕೆ ಪತ್ರ ಬರೆಯಲಾಗಿತ್ತು. ಈ ತೀರ್ಮಾನವನ್ನು ಕೈಬಿಡುವಂತೆ ಮುಖ್ಯಮಂತ್ರಿಗೆ ಒತ್ತಾಯಿಸಿದ್ದೆವು. ಆದರೂ ಸರ್ಕಾರ ಒಣ ಪ್ರತಿಷ್ಠೆ ತೋರಿಸಿಕೊಳ್ಳಲು ಮುಂದಾಗಿರುವುದು ನಾಚಿಕೆಗೇಡು’ ಎಂದು ಸಂಘದ ಅಧ್ಯಕ್ಷ ಭೀಮಾ ಶಂಕರ ಪಾಟೀಲ ಆರೋಪಿಸಿದರು.

‘ನಾಡಭಾಷೆಗೆ ದ್ರೋಹ ಬಗೆದು ಪರ ಭಾಷೆಗಳಿಗೆ ಬೆಂಬಲ ನೀಡುತ್ತಿದೆ. ಸರ್ಕಾರದ ಈ ನಿಲುವಿನಿಂದ ಕನ್ನಡ ಶಾಲೆಗಳಿಗೆ ದೊಡ್ಡ ಅಪಾಯ ಎದುರಾಗುತ್ತದೆ. ಇಂಗ್ಲಿಷ್ ಅನ್ನು ಒಂದು ಭಾಷೆಯಾಗಿ ಕಲಿಸಲಿ. ಇಲ್ಲವಾದಲ್ಲಿ ಇಂಗ್ಲಿಷ್‌ ಮಾಧ್ಯಮ ಶಾಲೆಗಳು ಆರಂಭವಾದ ದಿನದಂದೇ ಆ ಶಾಲೆಗಳನ್ನು ಮುಚ್ಚಿಸಿ ಪ್ರತಿಭಟನೆ ಮಾಡುತ್ತೇವೆ’ ಎಂದು ಎಚ್ಚರಿಸಿದರು.

‘ಕೇರಳದಲ್ಲಿ ಮಾತೃ ಭಾಷೆಯನ್ನು ಉಳಿಸಿಕೊಳ್ಳಲು ಭಾಷಾ ಮಸೂದೆ ಜಾರಿಗೆ ತರಲಾಗಿದೆ. ನಮ್ಮ ಸರ್ಕಾರವು ಅದೇ ಮಾದರಿಯಲ್ಲಿ ಮಸೂದೆ ಜಾರಿಗೆ ತಂದು ಕನ್ನಡ ಭಾಷೆಯ ಉಳಿವಿಗೆ ಪ್ರಯತ್ನಿಸಬೇಕು’ ಎಂದು ಒತ್ತಾಯಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !