ಇಂಗ್ಲಿಷ್ ಮಾಧ್ಯಮ: ಬೆಂಬಲ

7

ಇಂಗ್ಲಿಷ್ ಮಾಧ್ಯಮ: ಬೆಂಬಲ

Published:
Updated:

ಬೆಂಗಳೂರು: ರಾಜ್ಯ ಸರ್ಕಾರ ಮುಂಬರುವ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಶಾಲೆಗಳಲ್ಲಿ 1ನೇ ತರಗತಿಯಿಂದ ಇಂಗ್ಲಿಷ್ ಮಾಧ್ಯಮವನ್ನು ಜಾರಿಗೊಳಿಸುವ ಕ್ರಮಕ್ಕೆ ಪ್ರಗತಿಪರ ಸಂಘಟನೆಗಳ ಒಕ್ಕೂಟ ಬೆಂಬಲ ವ್ಯಕ್ತಪಡಿಸಿದೆ.

ನಗರದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದಲಿತ ಸಂಘರ್ಷ ಸಮಿತಿಯ ಸಂಚಾಲಕ ಮಾವಳ್ಳಿ ಶಂಕರ್, ‘ಈಗಾಗಲೇ ರಾಜ್ಯದ ಅರ್ಧಕ್ಕಿಂತ ಹೆಚ್ಚು ಮಕ್ಕಳು ಇಂಗ್ಲಿಷ್ ಮಾಧ್ಯಮದಲ್ಲಿ ಕಲಿತು ಉನ್ನತ ವಿದ್ಯಾಭ್ಯಾಸ ಹಾಗೂ ಉದ್ಯೋಗಾವಕಾಶಗಳನ್ನು ಪಡೆಯುತ್ತಿದ್ದಾರೆ.‌ ಸರ್ಕಾರಿ ಶಾಲೆಗಳಲ್ಲಿ ಕನ್ನಡ ಪರಿಸರಕ್ಕೆ ಸೂಕ್ತವಾಗುವಂತೆ ಇಂಗ್ಲಿಷ್ ಮಾಧ್ಯಮವನ್ನು ಹಂತಹಂತವಾಗಿ ಜಾರಿಗೊಳಿಸುವುದು ಇಂದಿನ ಅನಿವಾರ್ಯ’ ಎಂದರು.

‘ಪ್ರತಿ ಹೋಬಳಿಗೆ ಒಂದರಂತೆ ಇಂಗ್ಲಿಷ್ ಮಾಧ್ಯಮದ ಸರ್ಕಾ‌ರಿ ಶಾಲೆಗಳನ್ನು ಆರಂಭಿಸಬೇಕು. ಈಗಾಗಲೇ ಆರಂಭಿಸಿರುವ ಹಿರಿಯ ಪ್ರಾಥಮಿಕ ಮಟ್ಟದ ಕುವೆಂಪು ಮಾದರಿ ಶಾಲೆಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ಇಂಗ್ಲಿಷ್ ಮಾಧ್ಯಮ ಜಾರಿಯಿಂದ ಸರ್ಕಾರಿ ಶಾಲೆಗಳತ್ತ ಮಕ್ಕಳನ್ನು ಸೆಳೆಯುವ ಸಾಧ್ಯತೆ ಹೆಚ್ಚಾಗಲಿದೆ’ ಎಂದು
ಅಭಿಪ್ರಾಯಪಟ್ಟರು. 

‘ಕನ್ನಡ ಹಾಗೂ ಇಂಗ್ಲಿಷ್ ಎರಡೂ ಭಾಷೆಗಳನ್ನು ಸಮರ್ಥವಾಗಿ ಬೋಧಿಸಬಲ್ಲ ಶಿಕ್ಷಕರ ತರಬೇತಿಗೆ ಪ್ರತಿ ವರ್ಷ ಹೆಚ್ಚಿನ ಅವಧಿಯನ್ನು ಮೀಸಲಿಡಬೇಕು’ ಎಂದರು.

ಸಮತಾ ಸೈನಿಕ ದಳದ ಚನ್ನಕೃಷ್ಣಪ್ಪ, ರಂಗ ನಿರ್ದೇಶಕ ನಟರಾಜ್ ಹೊನ್ನವಳ್ಳಿ, ಗ್ರಾಮರಾಜ್ಯ ಸಾಂಸ್ಕೃತಿಕ ವೇದಿಕೆಯ ನಟರಾಜ್ ಹುಳಿಯಾರ್ ಇದ್ದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 1

  Sad
 • 0

  Frustrated
 • 0

  Angry

Comments:

0 comments

Write the first review for this !