ಗುರುವಾರ , ಸೆಪ್ಟೆಂಬರ್ 16, 2021
24 °C

ಮಲಯಾಳ ಚಿತ್ರನಟ ರಿಸಾಬಾವ ನಿಧನ

ಪಿಟಿಐ Updated:

ಅಕ್ಷರ ಗಾತ್ರ : | |

ಕೊಚ್ಚಿ: ಮಲಯಾಳ ಚಿತ್ರನಟ ರಿಸಾಬಾವ (54) ಅವರು ಅನಾರೋಗ್ಯದಿಂದ ಸೋಮವಾರ ನಿಧನರಾದರು.

 ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಮೂರು ದಿನಗಳ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

‘ಇನ್‌ ಹರಿಹರ್‌ ನಗರ್‌’ ಮಲಯಾಳ ಚಿತ್ರದ ‘ಜಾನ್‌ ಹೊನೈ’ ಪಾತ್ರದ ಮೂಲಕ ಅವರು ಗಮನ ಸೆಳೆದಿದ್ದರು.

‘ಡಾಕ್ಟರ್‌ ಪಶುಪತಿ’, ‘ಕಾಬೂಲಿವಾಲಾ’, ‘ನಿರಂ’,‘ನಸ್ರಾನಿ’ ಮೊದಲಾದ ಚಿತ್ರಗಳಲ್ಲಿ ಗಮನಾರ್ಹ ಪಾತ್ರಗಳಲ್ಲಿ ನಟಿಸಿದ್ದ ರಿಸಾಬಾವ ಅವರು, ಕಿರುತೆರೆಯ ಹಲವು ಧಾರಾವಾಹಿಗಳಲ್ಲೂ ಅಭಿನಯಿಸಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು