ಶುಕ್ರವಾರ, ಜನವರಿ 27, 2023
17 °C

ಕರ್ನಾಟಕ ಚಲನಚಿತ್ರ ಅಕಾಡೆಮಿ: ಅಧ್ಯಕ್ಷರಾಗಿ ಅಶೋಕ ಕಶ್ಯಪ್ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾಗಿ ಅಶೋಕ ಕಶ್ಯಪ್ ಅವರನ್ನು ನೇಮಿಸಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆಯ ಮೇರೆಗೆ ಸರ್ಕಾರದ ಮುಖ್ಯಕಾರ್ಯದರ್ಶಿಯವರು ವಿವಿಧ ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳಿಗೆ ಸೇರಿದ 52 ಅಧ್ಯಕ್ಷರ ನಾಮನಿರ್ದೇಶನ ಇತ್ತೀಚೆಗೆ ರದ್ದುಪಡಿಸಿ ಆದೇಶ ಹೊರಡಿಸಿದ್ದರು. ಆಗ, ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾಗಿದ್ದ ಸುನೀಲ್ ಪುರಾಣಿಕ್‌ ಕೂಡಾ ಹುದ್ದೆ ಕಳೆದುಕೊಂಡಿದ್ದರು.

ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ (ಕಿಯೋನಿಕ್ಸ್‌) ಹರಿಕೃಷ್ಣ ಬಂಟ್ವಾಳ ಅವರನ್ನು ಮರು ನೇಮಕ ಮಾಡಲಾಗಿದೆ. ನಾಮನಿರ್ದೇಶನ ರದ್ದುಪಡಿಸಿದವರ ಪಟ್ಟಿಯಲ್ಲಿ ಹರಿಕೃಷ್ಣ ಬಂಟ್ವಾಳ ಅವರ ಹೆಸರೂ ಇತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು