ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟ್ರೈಲರ್‌ ಹಾದಿಯಲ್ಲಿ ‘19.20.21’

Last Updated 24 ಜನವರಿ 2023, 7:18 IST
ಅಕ್ಷರ ಗಾತ್ರ

ಸರ್ಕಾರ, ಮೂಲನಿವಾಸಿಗಳು, ವ್ಯವಸ್ಥೆಯ ಜೊತೆಗಿನ ಸಂಘರ್ಷ, ಸಮಸ್ಯೆಗಳ ಸುತ್ತ ಹೆಣೆದಿರುವ ಕತೆ ‘19.20.21’. ಮಂಸೋರೆ ನಿರ್ದೇಶನದ ಚಿತ್ರವಿದು. ಚಿತ್ರದ ಟೀಸರ್‌ಗೆ ಸಾಕಷ್ಟು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜ. 27ರಂದು ಟ್ರೈಲರ್‌ ಬಿಡುಗಡೆಯಾಗಲಿದೆ.

ಸಾಮಾಜಿಕ ಥ್ರಿಲ್ಲರ್ ಕಥಾಹಂದರವನ್ನು ಈ ಚಿತ್ರ ಒಳಗೊಂಡಿದೆ. ರಂಗಭೂಮಿ ಕಲಾವಿದ ಶೃಂಗ ಬಿ.ವಿ. ಚಿತ್ರದಲ್ಲಿ ಮುಖ್ಯ ಭೂಮಿಕೆಯಲ್ಲಿದ್ದಾರೆ. ಬಾಲಾಜಿ ಮನೋಹರ್, ಸಂಪತ್, ಎಂ.ಡಿ.ಪಲ್ಲವಿ, ಮಹದೇವ್ ಹಡಪದ್, ಉಗ್ರಂ ಸಂದೀಪ್ ಅವರು ತಾರಾಗಣದಲ್ಲಿದ್ದಾರೆ.

ಹರಿವು, ನಾತಿ ಚರಾಮಿ, ಆ್ಯಕ್ಟ್‌–1978ನಂತಹ ಭಿನ್ನ ಮತ್ತು ಪ್ರಬಲ ವಿಷಯಗಳನ್ನೊಳಗೊಂಡ ಚಿತ್ರಗಳನ್ನು ನೀಡಿರುವ ನಿರ್ದೇಶಕ ಮಂಸೋರೆ ಈ ಚಿತ್ರದ ಮೂಲಕವೂ ಅಂಥದ್ದೇ ಕಥೆಯನ್ನು ಹೇಳಲು ಹೊರಟಿದ್ದಾರೆ. ನೈಜ ಘಟನೆಗಳನ್ನು ಆಧರಿಸಿ ಈ ಚಿತ್ರದ ಕಥೆಯಿದೆ ಎಂಬ ಸುಳಿವನ್ನು ಟೀಸರ್‌ ನೀಡಿದೆ.

ಯಲ್ಲಾಪುರ, ಧಾರವಾಡ, ಮಂಗಳೂರು, ಕುಂದಾಪುರದಲ್ಲಿ ಈ ಚಿತ್ರದ ಚಿತ್ರೀಕರಣ ನಡೆದಿದೆ. ಶಿವು ಬಿ.ಕೆ. ಕುಮಾರ್ ಛಾಯಾಗ್ರಹಣ, ರೋಣದ ಬಕ್ಕೇಶ್ ಹಿನ್ನೆಲೆ ಸಂಗೀತ ಚಿತ್ರಕ್ಕಿದೆ. ಬಿಂದು ಮಾಲಿನಿ ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಸುರೇಶ್ ಆರ್ಮುಗಂ ಸಂಕಲನ, ವೀರೇಂದ್ರ ಮಲ್ಲಣ್ಣ ಮತ್ತು ಅವಿನಾಶ್ ಜಿ ಸಂಭಾಷಣೆ, ಮಂಸೋರೆ ಮತ್ತು ವೀರೇಂದ್ರ ಮಲ್ಲಣ್ಣ ಚಿತ್ರಕಥೆ, ಕಿರಣ್ ಕಾವೇರಪ್ಪ ಸಾಹಿತ್ಯ ಚಿತ್ರಕ್ಕಿದೆ. ದೇವರಾಜ್ ಆರ್. ಸೆನ್ಸಾರ್ ಮಂಡಳಿ ಈ ಚಿತ್ರಕ್ಕೆ ‘ಎ’ ಪ್ರಮಾಣ ಪತ್ರ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT