ಭಾನುವಾರ, ಆಗಸ್ಟ್ 14, 2022
21 °C

‘ಅರ್ಜುನ್ ಗೌಡ’ ರೀರೆಕಾರ್ಡಿಂಗ್ ಮುಕ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಮು ಫಿಲಂಸ್ ಲಾಂಛನದಲ್ಲಿ ರಾಮು ಅವರು ನಿರ್ಮಿಸುತ್ತಿರುವ ಅದ್ದೂರಿ ಸಿನಿಮಾ ‘ಅರ್ಜುನ್ ಗೌಡ’ದ ರಿರೆಕಾರ್ಡಿಂಗ್‌ ಮುಕ್ತಾಯಗೊಂಡಿದೆ. ‌

ಇದರಲ್ಲಿ ಪ್ರಜ್ವಲ್‌ ದೇವರಾಜ್‌ ನಾಯಕ. ಪ್ರಿಯಾಂಕಾ ತಿಮ್ಮೇಶ್ ನಾಯಕಿ. ಬೆಂಗಳೂರು, ಮುಂಬೈ, ಚೆನ್ನೈ ಹಾಗೂ ಕೋಲ್ಕತಾದ ನಗರಗಳ ಪ್ರಸಿದ್ದ ಸ್ಟುಡಿಯೋಗಳಲ್ಲಿ ಈ ಚಿತ್ರದ ರೀರೆಕಾರ್ಡಿಂಗ್ ‌ ನಡೆದಿದೆ.
200ಕ್ಕೂ ಹೆಚ್ಚು ತಂತ್ರಜ್ಞರು ಈ ಕೆಲಸದಲ್ಲಿ ಪಾಲ್ಗೊಂಡಿದ್ದಾರೆ. ಧರ್ಮವಿಶ್ ಈ ಚಿತ್ರದ ಸಂಗೀತ ನಿರ್ದೇಶಕರು.

ಕಲರ್‌ ಗ್ರಾಫಿಕ್ಸ್‌ ಕೆಲಸವೂ ಮುಗಿದಿದೆ. ಬೆಂಗಳೂರಿನ ಖ್ಯಾತ ಆನಿಮಂತ್ರ ಸಂಸ್ಥೆ ಈ ಕೆಲಸ ನಿರ್ವಹಿಸಿದೆ. ಸುಮಾರು 80ತಂತ್ರಜ್ಞರ ತಂಡ ಇದರಲ್ಲಿ ಭಾಗವಹಿಸಿದ್ದಾರೆ.
80ಕ್ಕೂ ಹೆಚ್ಚು ನುರಿತ ತಂತ್ರಜ್ಞರು ಕಲರ್‌ ಗ್ರಾಫಿಕ್‌ ಕಾರ್ಯದಲ್ಲಿ ಭಾಗವಹಿಸಿದ್ದರು.
ಸದ್ಯದಲ್ಲೇ ಚಿತ್ರವನ್ನು ಸೆನ್ಸಾರ್‌ಗೆ ನೀಡಲಾಗುವುದು. ಬೆಂಗಳೂರು, ಮಂಗಳೂರು, ಮೈಸೂರು ಹಾಗೂ ಸಿಂಗಾಪುರದಲ್ಲಿ ಚಿತ್ರೀಕರಣ ನಡೆದಿದೆ ಎಂದು ಚಿತ್ರ ತಂಡದ ಮೂಲಗಳು ಹೇಳಿವೆ.

ಲಕ್ಕಿ ಶಂಕರ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ಏಳು ಸಾಹಸ ಸನ್ನಿವೇಶಗಳಿವೆ. ಚಿತ್ರದ ಟ್ರೇಲರ್‌ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.  
ಬಾಲಿವುಡ್‌ನ ರಾಹುಲ್ ದೇವ್, ಸ್ಪರ್ಶ, ರೇಖಾ, ಸಾಧುಕೋಕಿಲ, ಕಡ್ಡಿಪುಡಿ ಚಂದ್ರು, ದೀಪಕ್ ಶೆಟ್ಟಿ, ದಿನೇಶ್ ಮಂಗಳೂರು, ಶೋಭತ್, ಜೀವನ್, ಹನುಮಂತೇ ಗೌಡ, ಮೋಹನ್ ಜುನೇಜ ಮುಂತಾದವರು ಈ ಚಿತ್ರದ ತಾರಾಗಣದಲ್ಲಿದ್ದಾರೆ.

ಕವಿರಾಜ್, ರಾಘವೇಂದ್ರ ಕಾಮತ್, ಶಂಕರ್ ಅವರು ಚಿತ್ರದ ಹಾಡುಗಳನ್ನು ಬರೆದಿದ್ದು, ಜೈ ಆನಂದ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ , ಈಶ್ವರಿ ಕುಮಾರ್ ಕಲಾ ನಿರ್ದೇಶನ ಹಾಗೂ ಮೋಹನ್, ಕಂಬಿ‌ರಾಜು ಅವರ ನೃತ್ಯ ನಿರ್ದೇಶನ ‘ಅರ್ಜುನ್ ಗೌಡ’ ಚಿತ್ರಕ್ಕಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.