ಸೋಮವಾರ, ಮಾರ್ಚ್ 27, 2023
31 °C

ರಾಘವೇಂದ್ರ ರಾಜ್‌ಕುಮಾರ್‌ ಹಾಗೂ ನಟಿ ಶ್ರುತಿ ನಟನೆಯ ‘13’ರ ಚಿತ್ರೀಕರಣ ಪೂರ್ಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನಟ ರಾಘವೇಂದ್ರ ರಾಜ್‌ಕುಮಾರ್‌ ಹಾಗೂ ನಟಿ ಶ್ರುತಿ ನಟನೆಯ ಹೊಸ ಚಿತ್ರದ ಶೂಟಿಂಗ್‌ ಪೂರ್ಣಗೊಂಡಿದೆ. ಅಂತರ್ಜಾತಿ ಮದುವೆಯ ಕಥಾಹಂದರ ಹೊಂದಿರುವ ಈ ಚಿತ್ರ ಶೀಘ್ರದಲ್ಲೇ ತೆರೆ ಮೇಲೆ ಬರಲಿದೆ.

‘ಪಲ್ಲಕ್ಕಿ’, ‘ಅಮೃತವಾಹಿನಿ’ಯಂಥ ಚಿತ್ರಗಳಿಗೆ ಆ್ಯಕ್ಷನ್‌ ಕಟ್‌ ಹೇಳಿದ್ದ ನಿರ್ದೇಶಕ ಕೆ.ನರೇಂದ್ರಬಾಬು ನಿರ್ದೇಶನದ ಹೊಸ ಸಿನಿಮಾ 13ರ ಚಿತ್ರೀಕರಣ ಪೂರ್ಣಗೊಂಡಿದೆ. ರಾಘವೇಂದ್ರ ರಾಜ್‌ಕುಮಾರ್‌, ಶ್ರುತಿ, ಪ್ರಮೋದ್ ಶೆಟ್ಟಿ ಅಭಿನಯಿಸಿರುವ ಈ ಚಿತ್ರವನ್ನು ಯುವಿ ಪ್ರೊಡಕ್ಷನ್ಸ್‌ನಡಿ ಸಂಪತ್‌ ಕುಮಾರ್‌, ಮಂಜುನಾಥ್‌, ಮಂಜುನಾಥಗೌಡ ಸೇರಿ ನಿರ್ಮಿಸಿದ್ದಾರೆ.

‘ಅಂತರ್ಜಾತಿ ಪ್ರೇಮ ಕಥೆಯಿದು. ಗಂಡ- ಹೆಂಡತಿ ಅಂದರೆ ಹೀಗಿರಬೇಕು ಎನ್ನುವಂತಿದ್ದ ದಂಪತಿಗಳಿಬ್ಬರೂ ತಮ್ಮದಲ್ಲದ ತಪ್ಪಿಗೆ ಜೀವನವಿಡೀ ಹೇಗೆಲ್ಲಾ ಕಷ್ಟಪಡುತ್ತಾರೆ ಎಂಬುದನ್ನು ಹೇಳುವ, ಮನುಷ್ಯ ಸಂಬಂಧಗಳನ್ನು ಬೆಸೆಯುವ ಕಥೆಯಿದು’ ಎಂದಿದ್ದಾರೆ ನಿರ್ದೇಶಕರು.

ಚಿತ್ರದಲ್ಲಿ ರಾಘವೇಂದ್ರ ರಾಜ್‌ಕುಮಾರ್‌ ಗುಜರಿ ಅಂಗಡಿ ಓನರ್‌ ಮೋಹನ್ ಕುಮಾರ್ ಎಂಬ ಪಾತ್ರದಲ್ಲಿ ಹಾಗೂ ಟೀ ಅಂಗಡಿ ನಡೆಸುವ ಸಾಯಿರಾಬಾನು ಎಂಬ ಮುಸ್ಲಿಂ ಮಹಿಳೆಯ ಪಾತ್ರದಲ್ಲಿ ಶ್ರುತಿ ನಟಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಭಾಗದಲ್ಲಿ ನಡದೆ ಒಂದು ನೈಜ ಘಟನೆಯನ್ನು ಸ್ಫೂರ್ತಿಯಾಗಿಟ್ಟುಕೊಂಡು ಈ ಚಿತ್ರಕಥೆಯನ್ನು ನರೇಂದ್ರ ಬಾಬು ಹೆಣೆದಿದ್ದಾರೆ. ಅಂತರ್ಜಾತೀಯ ಪ್ರೇಮ ಕಥೆ ಇದಾಗಿದೆ. ಪ್ರಮೋದ್ ಶೆಟ್ಟಿ ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯ ಪಾತ್ರವನ್ನು ನಿರ್ವಹಿಸಿದ್ದಾರೆ. ಮಂಜುನಾಥ್‌ ನಾಯ್ಡು ಅವರ ಛಾಯಾಗ್ರಹಣ ಹಾಗೂ ಸೋಹನ್‌ ಬಾಬು ಅವರ ಸಂಗೀತ ಈ ಚಿತ್ರಕ್ಕಿದೆ.

ರಾಘವೇಂದ್ರ ರಾಜ್‌ ಕುಮಾರ್‌ ಅವರದ್ದು ಮೋಹನ ಕುಮಾರ ಪಾತ್ರ. ಶ್ರುತಿ ಅವರು ಇಲ್ಲಿ ಸಾಯಿರಾಬಾನು ಆಗಿದ್ದಾರೆ. ಚಿತ್ರ ಪೋಸ್ಟ್‌ ಪ್ರೊಡಕ್ಷನ್‌ ಹಂತದಲ್ಲಿದೆ. ಸಂಪತ್‌ ಕುಮಾರ್‌, ಮಂಜುನಾಥ್‌, ಮಂಜುನಾಥಗೌಡ ಚಿತ್ರದ ನಿರ್ಮಾಪಕರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು