ಬುಧವಾರ, 11 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಈ ವಾರ ‘ಪೆಪೆ’ ಸೇರಿದಂತೆ ಆರು ಚಿತ್ರಗಳು ತೆರೆಗೆ

Published 29 ಆಗಸ್ಟ್ 2024, 23:59 IST
Last Updated 29 ಆಗಸ್ಟ್ 2024, 23:59 IST
ಅಕ್ಷರ ಗಾತ್ರ

ಈ ವಾರ ‘ಪೆಪೆ’ ಸೇರಿದಂತೆ ಆರು ಚಿತ್ರಗಳು ತೆರೆ ಕಾಣುತ್ತಿವೆ. 

ಲಾಫಿಂಗ್ ಬುದ್ಧ

ನಟ ರಿಷಬ್ ಶೆಟ್ಟಿ ನಿರ್ಮಿಸಿ, ಪ್ರಮೋದ್ ಶೆಟ್ಟಿ ನಾಯಕನಾಗಿ ನಟಿಸಿರುವ ‘ಲಾಫಿಂಗ್ ಬುದ್ಧ’ ಪೊಲೀಸ್‌ ಪೇದೆಯೊಬ್ಬನ ಹಾಸ್ಯಮಯ ಕಥಾಹಂದರ ಹೊಂದಿರುವ ಚಿತ್ರ. ಪೊಲೀಸ್ ಪೇದೆ ಗೋವರ್ಧನನಾಗಿ ಪ್ರಮೋದ್ ಶೆಟ್ಟಿ ನಟಿಸಿದ್ದಾರೆ. ತನ್ನ ದಢೂತಿ ದೇಹದಿಂದ ತಮಾಷೆಗೆ ಒಳಗಾಗುವ ಗೋವರ್ಧನ, ಹಿರಿಯ ಅಧಿಕಾರಿಗಳಿಂದ ಟೀಕೆ, ನಿಂದನೆಗೆ ಗುರಿಯಾಗುತ್ತಾನೆ. ಬಳಿಕ ದೇಹ ಕರಗಿಸಲು ನಡೆಸುವ ಕಸರತ್ತೇ ಚಿತ್ರದ ಕಥೆ.

ಚಿತ್ರಕ್ಕೆ ಭರತ್ ರಾಜ್ ನಿರ್ದೇಶನವಿದೆ. ತೇಜು ಬೆಳವಾಡಿ ‘ಸತ್ಯವತಿ’ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ದಿಗಂತ್ ಮಂಚಾಲೆ ಕೂಡ ಪಾತ್ರವೊಂದನ್ನು ನಿಭಾಯಿಸಿದ್ದಾರೆ. ವಿಷ್ಣು ವಿಜಯ್‌ ಸಂಗೀತ, ಕೆ.ಎಸ್.ಚಂದ್ರಶೇಖರ್ ಅವರ ಛಾಯಾಚಿತ್ರಗ್ರಹಣ, ಕೆ.ಎಂ.ಪ್ರಕಾಶ್ ಅವರ ಸಂಕಲನ‌ ಈ ಚಿತ್ರಕ್ಕಿದೆ.

ಕೇದಾರ್‌ನಾಥ್ ಕುರಿಫಾರಂ

‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಮಡೆನೂರ್ ಮನು ಅಭಿನಯದ ಈ ಚಿತ್ರವನ್ನು ಕೆ.ಎಂ. ನಟರಾಜ್ ಅವರು ನಿರ್ಮಿಸಿದ್ದು, ಶೀನು ಸಾಗರ್ ನಿರ್ದೇಶನವಿದೆ. ‘ದುನಿಯಾ’ ಸೂರಿ ಅವರ ನಿರ್ದೇಶನದ ಚಿತ್ರಗಳಲ್ಲಿ ನಟನಾಗಿ ಹಾಗೂ ಸಹಾಯಕ ನಿರ್ದೇಶಕನಾಗಿದ್ದ ಶೀನು ಸಾಗರ್‌ ಅವರ ಎರಡನೇ ಚಿತ್ರವಿದು. ಹಳ್ಳಿ ಸೊಗಡಿನ ಮನರಂಜನೆಯಿದೆ. ಶಿವಾನಿ ಚಿತ್ರದ ನಾಯಕಿ.

ದಿ ರೂಲರ್ಸ್‌

ಸಂವಿಧಾನದ ಮಹತ್ವ ಸಾರುವ ಚಿತ್ರ ‘ದಿ ರೂಲರ್ಸ್‌’. ಎಮ್.ಸಂದೇಶ್ ಕಥೆ,ಚಿತ್ರಕಥೆ,ಸಂಭಾಷಣೆ ಬರೆದಿದ್ದಾರೆ. ಉದಯ್ ಭಾಸ್ಕರ್‌ ಆ್ಯಕ್ಷನ್‌ ಕಟ್ ಹೇಳಿರುವ ಚಿತ್ರಕ್ಕೆ ಅಶ್ವತ್ ಬಳಗೆರೆ ಬಂಡವಾಳ ಹೂಡಿದ್ದಾರೆ. 

ಕರುಣ್ ಕೆ.ಜಿ.ಎಫ್ ಸಂಗೀತ ಸಂಯೋಜಿಸಿದ್ದು, ವಿಶಾಲ್, ರಿತಿಕಾ ಗೌಡ, ಪುನೀತ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. 

ಟೇಕ್ವಾಂಡೋ ಗರ್ಲ್

ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ , ಅತ್ಯಾಚಾರದ ವಿರುದ್ಧ ಧ್ವನಿ ಎತ್ತುವ ‘ಟೇಕ್ವಾಂಡೋ ಗರ್ಲ್’ ಚಿತ್ರಕ್ಕೆ ರವೀಂದ್ರ ವಂಶಿ ನಿರ್ದೆಶನವಿದೆ. ‘ಒಂದು ಬಡ ಕುಟುಂಬದ ಹೆಣ್ಣು ಮಗಳು ಶಿಕ್ಷಣಕ್ಕಾಗಿ ಎಷ್ಟು ಕಷ್ಟಪಡುತ್ತಾಳೆ, ಟೇಕ್ವಾಂಡೋ ಸಮರ ಕಲೆ ಹೇಗೆ ಕಲಿಯುತ್ತಾಳೆ, ಈ ವಿದ್ಯೆಯ ಮುಖಾಂತರ ಸಮಾಜಕ್ಕೆ ಹೇಗೆ ಮಾದರಿಯಾಗುತ್ತಾಳೆ ಎನ್ನುವುದೇ ಈ ಚಿತ್ರದ ಕಥೆ. 5ನೇ ತರಗತಿಯಲ್ಲಿ ಓದುತ್ತಿರುವ ಋತು ಸ್ಪರ್ಶ 3ನೇ ವಯಸ್ಸಿನಿಂದ ಈ ಕಲೆಯನ್ನು ಅಭ್ಯಾಸ ಮಾಡಿದ್ದಾಳೆ. ಒಟ್ಟು ಎಂಟು ಪರೀಕ್ಷೆಗಳನ್ನು ಎದುರಿಸಿ ಈಗ ಬ್ಲಾಕ್ ಬೆಲ್ಟ್ ಪಡೆದು ನಾಲ್ಕು ಅಂತರರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿ ಟೇಕ್ವಾಂಡೋ ಪಟು ಆಗಿದ್ದಾಳೆ’ ಎಂದಿದ್ದಾರೆ ನಿರ್ದೇಶಕರು. ಚಿತ್ರಕ್ಕೆ ಎಂ.ಎಸ್‌. ತ್ಯಾಗರಾಜ್ ಸಂಗೀತ ನಿರ್ದೇಶನವಿದೆ.

ಮೈ ಹೀರೋ

ಅವಿನಾಶ್‌ ವಿಜಯ್‌ಕುಮಾರ್‌ ನಿರ್ದೇಶನದ ಈ ಚಿತ್ರ ವರ್ಣಬೇಧ ಮತ್ತು ಜಾತೀಯತೆಯ ಕುರಿತಾಗಿನ ಕಥೆ ಹೊಂದಿದೆ. ಭಾರತ ಮತ್ತು ಅಮೆರಿಕದಲ್ಲಿ ಕಥೆ ನಡೆಯುತ್ತದೆ. ಎರಿಕ್ ರಾಬರ್ಟ್ಸ್, ಜೇಮ್ಸ್ ಜಿಯೋಯಾ, ಜಿಲಾಲಿ ರೆಜ್ ಕಲ್ಲಾ, ಅಂಕಿತಾ ಅಮರ್, ನಿರಂಜನ್ ದೇಶಪಾಂಡೆ, ತನುಜಾ ಕೃಷ್ಣಪ್ಪ, ಕ್ಷಿತಿಜ್ ಪವಾರ್, ಪ್ರಕಾಶ್ ಬೆಳವಾಡಿ, ದತ್ತಾತ್ರೇಯ, ಮಾಸ್ಟರ್ ವೇದಿಕ್ ಕುಶಾಲ್ ಮುಂತಾದವರು ಚಿತ್ರದಲ್ಲಿದ್ದಾರೆ. ಎ.ವಿ. ಫಿಲ್ಮ್ ಸ್ಟುಡಿಯೋಸ್ ನಿರ್ಮಾಣದ ಈ ಚಿತ್ರವನ್ನು ಪಿವಿಆರ್ ಸಿನಿಮಾಸ್ ಪ್ರಸ್ತುಪಡಿಸುತ್ತಿದೆ. ವೀನಸ್ ನಾಗರಾಜ್ ಮೂರ್ತಿ ಛಾಯಾಚಿತ್ರಗ್ರಹಣ, ಗಗನ್ ಬಡೇರಿಯಾ ಸಂಗೀತ, ವಿ.ಮನೋಹರ್ ಹಿನ್ನೆಲೆ ಸಂಗೀತವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT