ಶುಕ್ರವಾರ, ಮೇ 20, 2022
18 °C

ಯುಎಫ್‌ಒದಿಂದ ‘777 ಚಾರ್ಲಿ’ ಹಿಂದಿ ಅವತರಣಿಕೆ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನಟ ರಕ್ಷಿತ್‌ ಶೆಟ್ಟಿ ಅಭಿನಯದ ಪ್ಯಾನ್‌ ಇಂಡಿಯಾ ಸಿನಿಮಾ ‘777 ಚಾರ್ಲಿ’ ವಿಶ್ವದಾದ್ಯಂತ ಜೂನ್‌ 10ಕ್ಕೆ ಬಿಡುಗಡೆಯಾಗಲಿದ್ದು, ಚಿತ್ರದ ಹಿಂದಿ ಅವತರಣಿಕೆಯನ್ನು ಯುಎಫ್‌ಒ ಸಂಸ್ಥೆ ವಿತರಣೆ ಮಾಡಲಿದೆ. 

ಇನ್‌ಸ್ಟಾಗ್ರಾಂನಲ್ಲಿ ಈ ಕುರಿತು ಮಾಹಿತಿಯನ್ನು ರಕ್ಷಿತ್‌ ಶೆಟ್ಟಿ ಹಂಚಿಕೊಂಡಿದ್ದಾರೆ. ಈಗಾಗಲೇ ಚಿತ್ರದ ಕನ್ನಡ ಆವೃತ್ತಿಯ ಡಿಜಿಟಲ್‌ ಹಾಗೂ ಸ್ಯಾಟಲೈಟ್‌ ಪ್ರಸಾರದ ಹಕ್ಕನ್ನು ಕಲರ್ಸ್‌ ಕನ್ನಡ ಹಾಗೂ ವೂಟ್‌ ಪಡೆದುಕೊಂಡಿದೆ. ಚಿತ್ರವು ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ತೆರೆಕಾಣಲಿದೆ. ಚಿತ್ರದ ತೆಲುಗು ಅವತರಣಿಕೆಯನ್ನು ನಟ, ನಿರ್ಮಾಪಕ ರಾಣಾ ದಗ್ಗುಬಾಟಿ ಅವರು ತಮ್ಮ ಸುರೇಶ್‌ ಪ್ರೊಡಕ್ಷನ್ಸ್‌ ಮೂಲಕ ಪ್ರಸ್ತುತಪಡಿಸುತ್ತಿದ್ದಾರೆ. ಮಲಯಾಳಂನಲ್ಲಿ ನಟ, ನಿರ್ಮಾಪಕ ಪೃಥ್ವಿರಾಜ್‌ ಸುಕುಮಾರನ್‌, ತಮಿಳಿನಲ್ಲಿ ನಿರ್ದೇಶಕ ಕಾರ್ತಿಕ್‌ ಸುಬ್ಬರಾಜ್‌ ಈ ಚಿತ್ರವನ್ನು ಪ್ರಸ್ತುತಪಡಿಸುತ್ತಿದ್ದಾರೆ. 

‘777 ಚಾರ್ಲಿ’ ಚಿತ್ರಕ್ಕೆ ಯು/ಎ ಪ್ರಮಾಣಪತ್ರ ದೊರಕಿದೆ. ಸಂಗೀತಾ ಶೃಂಗೇರಿ ಚಿತ್ರದ ನಾಯಕಿ. ಚಿತ್ರದಲ್ಲಿ ನಟ, ನಿರ್ದೇಶಕ ರಾಜ್‌ ಬಿ.ಶೆಟ್ಟಿ, ಡ್ಯಾನಿಶ್‌ ಸೇಠ್‌ ತಾರಾಗಣದಲ್ಲಿದ್ದಾರೆ. ಜಿ.ಎಸ್‌.ಗುಪ್ತ ಹಾಗೂ ರಕ್ಷಿತ್‌ ಶೆಟ್ಟಿ ಈ ಚಿತ್ರದ ನಿರ್ಮಾಪಕ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು