ಗುರುವಾರ , ಜುಲೈ 7, 2022
20 °C

'83' ಚಿತ್ರಕ್ಕೆ ಯಾವುದೇ ತೆರಿಗೆ ಇಲ್ಲ: ದೆಹಲಿ ಸರ್ಕಾರ ಘೋಷಣೆ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ನವದೆಹಲಿ: ಕಬೀರ್ ಖಾನ್ ನಿರ್ದೇಶನದ ಬಹುನಿರೀಕ್ಷಿತ '83‘ ಚಿತ್ರಕ್ಕೆ ಯಾವುದೇ ತೆರಿಗೆಯನ್ನು ವಿಧಿಸುವುದಿಲ್ಲ ಎಂದು ದೆಹಲಿ ಸರ್ಕಾರ ಘೋಷಿಸಿದೆ.

ಈ ಕುರಿತು ಟ್ವೀಟ್‌ ಮಾಡಿರುವ ರಿಲಯನ್ಸ್ ಎಂಟರ್‌ಟೈನ್‌ಮೆಂಟ್‌ ಗ್ರೂಪ್‌ನ ಸಿಇಒ ಶಿಬಾಶಿಶ್ ಸರ್ಕಾರ್‌, ‘ದೆಹಲಿಯಲ್ಲಿ 83 ಚಿತ್ರವು ತೆರಿಗೆ ಮುಕ್ತ ಎಂದು ಘೋಷಿಸಲಾಗಿದೆ. ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಅವರಿಗೆ ಧನ್ಯವಾದಗಳು‘ ಎಂದು ತಿಳಿಸಿದ್ದಾರೆ. 

ಕಪಿಲ್‌ ದೇವ್‌ ನಾಯಕತ್ವದಲ್ಲಿ ಟೀಮ್ ಇಂಡಿಯಾ ವಿಶ್ವಕಪ್ ಗೆದ್ದ ರೋಚಕ ಕಥೆಯನ್ನು ಹೊಂದಿರುವ ‘83‘ ಚಿತ್ರವು ಶುಕ್ರವಾರ(ಡಿಸೆಂಬರ್‌ 24) ಬಿಡುಗಡೆಯಾಗಲಿದೆ.  ಹಿಂದಿ, ತಮಿಳು, ತೆಲುಗು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ‘83‘ ತೆರೆಕಾಣಲಿದೆ. 

ಕಪಿಲ್ ದೇವ್ ಪಾತ್ರದಲ್ಲಿ ರಣವೀರ್ ಸಿಂಗ್ ಹಾಗೂ ಕಪಿಲ್‌ ದೇವ್‌ ಅವರ ಪತ್ನಿ ರೋಮಿ ದೇವ್ ಪಾತ್ರದಲ್ಲಿ ದೀಪಿಕಾ ಪಡುಕೋಣೆ ಕಾಣಿಸಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು