ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Oscars2023: ಅತ್ಯುತ್ತಮ ಚಿತ್ರ ಯಾವುದು?ಯಾರಿಗೆ ಯಾವ ಪ್ರಶಸ್ತಿ? ಇಲ್ಲಿದೆ ಮಾಹಿತಿ

Last Updated 13 ಮಾರ್ಚ್ 2023, 7:19 IST
ಅಕ್ಷರ ಗಾತ್ರ

ಲಾಸ್‌ ಏಂಜಲಿಸ್‌: 'ಎವೆರಿಥಿಂಗ್ ಎವೆರಿವೇರ್ ಆಲ್ ಅಟ್ ಒನ್ಸ್‌' ಸಿನಿಮಾವು 95ನೇ ಆಸ್ಕರ್‌ ಪ್ರಶಸ್ತಿ ಸಮಾರಂಭದಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಬಾಚಿ ಇತಿಹಾಸ ಬರೆಯಿತು.

ಭಾನುವಾರ ಸಂಜೆ ಇಲ್ಲಿನ ಹಾಲಿವುಡ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಆಸ್ಕರ್‌ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭವು ಅದ್ಧೂರಿಯಾಗಿ ನಡೆಯಿತು. ಸಮಾರಂಭದಲ್ಲಿ ಸಿನಿಮಾ ತಾರೆಯರು, ತಂತ್ರಜ್ಞರು ಸೇರಿದಂತೆ ಸಿನಿಮಾ ಅಭಿಮಾನಿಗಳು ಕಿಕ್ಕಿರಿದು ತುಂಬಿದ್ದರು.

ಎಸ್.ಎಸ್‌ ರಾಜಮೌಲಿ ನಿರ್ದೇಶನದ ತೆಲುಗಿನ ಆರ್‌.ಆರ್‌.ಆರ್ ಸಿನಿಮಾದ ‘ನಾಟು ನಾಟು‘ ಹಾಡಿಗೆ ಆಸ್ಕರ್‌ ಪ್ರಶಸ್ತಿ ಒಲಿದಿದೆ. ಚಂದ್ರಬೋಸ್‌ ಬರೆದಿರುವ ‘ನಾಟು ನಾಟು‘ ಹಾಡಿಗೆ ಎಂ.ಎಂ ಕೀರವಾಣಿಯವರು ಸಂಗೀತ ಸಂಯೋಜನೆ ಮಾಡಿದ್ದಾರೆ.

ತಮಿಳಿನ ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರ ವಿಭಾಗದಲ್ಲಿ ಆಸ್ಕರ್‌ ಪ್ರಶಸ್ತಿ ಪಡೆಯಿತು. ಇದೇ ಮೊದಲ ಸಲ ಭಾರತಕ್ಕೆ ಎರಡು ಆಸ್ಕರ್‌ ಪ್ರಶಸ್ತಿಗಳು ಬಂದಿರುವುದು ವಿಶೇಷ.

ಆಸ್ಕರ್‌ ಪ್ರಶಸ್ತಿಗೆ ಗಳಿಸಿದ ಚಿತ್ರ ಹಾಗೂ ಕಲಾವಿದರ ವಿವರ ಇಲ್ಲಿದೆ...

*ಅತ್ಯುತ್ತಮ ಚಿತ್ರ: ಎವೆರಿಥಿಂಗ್ ಎವೆರಿವೇರ್ ಆಲ್ ಅಟ್ ಒನ್ಸ್‌

*ಅತ್ಯುತ್ತಮ ನಿರ್ದೇಶಕ: ಡೇನಿಯಲ್ ಕ್ವಾನ್ ಮತ್ತು ಡೇನಿಯಲ್ ಸ್ಕೀನೆರ್ಟ್ (ಎವೆರಿಥಿಂಗ್ ಎವೆರಿವೇರ್ ಆಲ್ ಅಟ್ ಒನ್ಸ್‌)

*ಅತ್ಯುತ್ತಮ ನಟಿ: ಮಿಶೆಲ್‌ ಯೋಹ್ (ಎವೆರಿಥಿಂಗ್ ಎವೆರಿವೇರ್ ಆಲ್ ಅಟ್ ಒನ್ಸ್‌)

*ಅತ್ಯುತ್ತಮ ನಟ: ಬ್ರೆಂಡನ್ ಫ್ರೇಸರ್- (ದಿ ವೇಲ್)

*ಅತ್ಯುತ್ತಮ ಅಂತರರಾಷ್ಟ್ರೀಯ ಚಲನಚಿತ್ರ: ಆಲ್ ಕ್ವೈಟ್ ಆನ್ ದಿ ವೆಸ್ಟರ್ನ್ ಫ್ರಂಟ್ (ಜರ್ಮನಿ)

*ಅತ್ಯುತ್ತಮ ಪೋಷಕ ನಟ: ಕೆ ಹುಯ್ ಕ್ವಾನ್ (ಎವೆರಿಥಿಂಗ್ ಎವೆರಿವೇರ್ ಆಲ್ ಅಟ್ ಒನ್ಸ್‌)

*ಅತ್ಯುತ್ತಮ ಪೋಷಕ ನಟಿ: ಜೇಮಿ ಲೀ ಕರ್ಟಿಸ್ (ಎವೆರಿಥಿಂಗ್ ಎವೆರಿವೇರ್ ಆಲ್ ಅಟ್ ಒನ್ಸ್‌)

*ಅತ್ಯುತ್ತಮ ಹಾಡು: ನಾಟು ನಾಟು (ಆರ್‌ಆರ್‌ಆರ್‌–ತೆಲುಗು)

*ಅತ್ಯುತ್ತಮ ವಿಶ್ಯುವಲ್ ಎಫೆಕ್ಟ್: ಅವತಾರ್-ದಿ ವೇ ಆಫ್ ವಾಟರ್

*ಅತ್ಯುತ್ತಮ ಧ್ವನಿ ವಿನ್ಯಾಸ: ಟಾಪ್ ಗನ್ - ಮೇವರಿಕ್.

*ಅತ್ಯುತ್ತಮ ಸಂಕಲನ: ಪೌಲ್‌ ರಾಗರ್ಸ್‌ (ಎವೆರಿಥಿಂಗ್ ಎವೆರಿವೇರ್ ಆಲ್ ಅಟ್ ಒನ್ಸ್‌)

*ಅತ್ಯುತ್ತಮ ಛಾಯಾಗ್ರಹಣ: ಆಲ್ ಕ್ವೈಟ್ ಆನ್ ದಿ ವೆಸ್ಟರ್ನ್ ಫ್ರಂಟ್

*ಅತ್ಯುತ್ತಮ ಮೂಲ ಚಿತ್ರಕಥೆ: ಎವೆರಿಥಿಂಗ್ ಎವೆರಿವೇರ್ ಆಲ್ ಅಟ್ ಒನ್ಸ್‌

*ಅತ್ಯುತ್ತಮ ಸಾಕ್ಷ್ಯಚಿತ್ರ: ನವಲ್ನಿ

*ಅತ್ಯುತ್ತಮ ಅನಿಮೇಟೆಡ್ ಚಲನಚಿತ್ರ: ಗಿಲ್ಲೆರ್ಮೊ ಡೆಲ್ ಟೊರೊ ಅವರ ಪಿನೋಚ್ಚಿಯೋ.

*ಅತ್ಯುತ್ತಮ ಮೇಕಪ್‌ ಮತ್ತು ಕೇಶ ವಿನ್ಯಾಸ: ದಿ ವೇಲ್

*ಅತ್ಯುತ್ತಮ ಸಾಕ್ಷ್ಯಚಿತ್ರ ಕಿರುಚಿತ್ರ: ‘ದಿ ಎಲಿಫೆಂಟ್ ವಿಸ್ಪರರ್ಸ್ (ತಮಿಳು)

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT