ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರೀಕರಣ ಮುಗಿಸಿದ ‘99’

Last Updated 28 ಫೆಬ್ರುವರಿ 2019, 12:51 IST
ಅಕ್ಷರ ಗಾತ್ರ

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಚಿತ್ರ ‘99’ರ ಶೂಟಿಂಗ್‌ ಪೂರ್ಣಗೊಂಡಿದ್ದು ಮಾರ್ಚ್ ಮೊದಲವಾರದಲ್ಲಿ ಮೊದಲ ಹಾಡು ಬಿಡುಗಡೆಯಾಗಲಿದೆ. ಇದು ಅರ್ಜುನ್‌ ಜನ್ಯ ಸಂಗೀತ ನಿರ್ದೇಶನದ ನೂರನೇ ಚಿತ್ರ.

ರಾಮು ಫಿಲಮ್ಸ್‌ ಲಾಂಛನದಲ್ಲಿ ರಾಮು ಅವರು ನಿರ್ಮಿಸುತ್ತಿರುವ 39ನೇ ಚಿತ್ರವಿದು. ಚಿತ್ರದಲ್ಲಿ ಒಟ್ಟು ಎಂಟು ಹಾಡುಗಳಿದ್ದು ಆ ಪೈಕ್ಕಿ ಐದು ಹಾಡುಗಳನ್ನು ಶ್ರೇಯಾ ಘೋಶಾಲ್ ಹಾಡಿದ್ದಾರೆ. ಹೆಸರಾಂತ ಗಾಯಕರಾದ ವಿಜಯ್ ಪ್ರಕಾಶ್, ಅರಿಜಿತ್ ಸಿಂಗ್, ಮೋಹಿತ್ ಚೌಹಾನ್, ಪಲಾಕ್ ಮುಚ್ಚಲ್, ಅರ್ಮಾನ್ ಮಲ್ಲಿಕ್ ಕೂಡ ಹಾಡುಗಳಿಗೆ ಕಂಠ ನೀಡಿದ್ದಾರೆ. ಯುಗಾದಿ ವೇಳೆಗೆ ಚಿತ್ರ ತೆರೆಗೆ ಬರಲಿದೆ. ಚಿತ್ರದ ಎಲ್ಲ ಹಾಡುಗಳನ್ನು ಕವಿರಾಜ್ ಬರೆದಿದ್ದಾರೆ.

ಪ್ರೀತಂ ಗುಬ್ಬಿ ನಿರ್ದೇಶನದ ಈ ಚಿತ್ರದಲ್ಲಿ ಜಾಕಿ ಭಾವನಾ ನಾಯಕಿಯಾಗಿ ನಟಿಸಿದ್ದಾರೆ. ಹೇಮಂತ್, ಸಮೀಕ್ಷಾ ಮುಂತಾದವರು ಅಭಿನಯಿಸಿದ್ದಾರೆ. ಸಂತೋಷ್ ರೈ ಪಾತಾಜೆ ಛಾಯಾಗ್ರಹಣ ಹಾಗೂ ಕೆ.ಎಂ. ಪ್ರಕಾಶ್ ಸಂಕಲನ ಈ ಚಿತ್ರಕ್ಕಿದೆ.

***

ಏಪ್ರಿಲ್‌ನಲ್ಲಿ ‘ಭೈರವ’ ಶೂಟಿಂಗ್‌
ಚಿರಂಜೀವಿ ಸರ್ಜಾ ನಾಯಕರಾಗಿ ನಟಿಸಲಿರುವ ‘ಭೈರವ’ ಚಿತ್ರದ ಚಿತ್ರೀಕರಣ ಏಪ್ರಿಲ್‍ನಲ್ಲಿ ಆರಂಭವಾಗಲಿದೆ. ಎಂ.ಬಿ. ಮಂಜುಳಾ ಶಿವಾರ್ಜುನ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

‘ಮಳೆ’ ಹಾಗೂ ‘ಲೌಡ್ ಸ್ಪೀಕರ್’ ಚಿತ್ರಗಳನ್ನು ನಿರ್ದೇಶಿಸಿರುವ ಶಿವತೇಜಸ್ ಅವರು ಚಿತ್ರದ ನಿರ್ದೇಶಕ. ಸುರಾಗ್ ಸಾಧುಕೋಕಿಲ ಸಂಗೀತ ನಿರ್ದೇಶನದ ಈ ಚಿತ್ರಕ್ಕೆ ಎಚ್.ಸಿ. ವೇಣುಗೋಪಾಲ್ ಅವರ ಛಾಯಾಗ್ರಹಣವಿದೆ. ಚಿರಂಜೀವಿ ಸರ್ಜಾ, ಅಮೃತ, ಸಾಧುಕೋಕಿಲ, ಕುರಿ ಪ್ರತಾಪ್, ಶಿವರಾಜ್ ಕೆ.ಆರ್. ಪೇಟೆ, ಕಿಶೋರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

***
ಮಾತಿನಮನೆಯಲ್ಲಿ ‘ಸಿಂಗ’
ಯು.ಕೆ.ಎಂ. ಸ್ಟುಡಿಯೋಸ್ ಲಾಂಛನದಲ್ಲಿ ಉದಯ್ ಕೆ ಮೆಹ್ತಾ ಅವರು ನಿರ್ಮಿಸುತ್ತಿರುವ ‘ಸಿಂಗ’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯ ಸಿನಿಮಾಕ್ಕೆ ಮಾತಿನ ಜೋಡಣೆ ನಡೆಯುತ್ತಿದೆ.

ಈ ಹಿಂದೆ ‘ರಾಮ್‍ಲೀಲಾ’ ಚಿತ್ರವನ್ನು ನಿರ್ದೇಶಿಸಿದ್ದ ವಿಜಯ್ ಕಿರಣ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಕಿರಣ್ ಹಂಪಾಪುರ ಛಾಯಾಗ್ರಹಣ, ಧರ್ಮ ವಿಶ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಡಾ.ವಿ. ನಾಗೇಂದ್ರ ಪ್ರಸಾದ್, ಕವಿರಾಜ್ ಹಾಗೂ ಚೇತನ್ ಹಾಡುಗಳನ್ನು ಬರೆದಿದ್ದಾರೆ.

ಚಿರಂಜೀವಿ ಸರ್ಜಾ ನಾಯಕನಾಗಿ ನಟಿಸುತ್ತಿರುವ ಈ ಚಿತ್ರದ ನಾಯಕಿ ಅದಿತಿ ಪ್ರಭುದೇವ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT