ಮಂಗಳವಾರ, ಏಪ್ರಿಲ್ 20, 2021
24 °C

‘ಆ ಒಂದು ಕನಸು’ ಶೀಘ್ರ ಹಾಡುಗಳ ಚಿತ್ರೀಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಂಗು ಕ್ರಿಯೇಷನ್ಸ್ ಲಾಂಛನದಲ್ಲಿ ದಿಲೀಪ ಬಿ.ಎಂ ಅವರು ನಿರ್ಮಿಸುತ್ತಿರುವ ‘ಆ ಒಂದು ಕನಸು’ ಚಿತ್ರದ ಹಾಡುಗಳ ಚಿತ್ರೀಕರಣ ಸದ್ಯದಲ್ಲೇ ಆರಂಭವಾಗಲಿದೆ. ಮಲೆನಾಡಿನ ಸುಂದರ ತಾಣ ಹಾಗೂ ನೆರೆರಾಜ್ಯಗಳ‌ ರಮಣೀಯ ಸ್ಥಳಗಳಲ್ಲಿ ಹಾಡುಗಳ ಚಿತ್ರೀಕರಣ ನಡೆಯಲಿದೆ.

ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿದ್ದು, ಮುಂದಿನ ವಾರದಿಂದ ಮಾತಿನ‌ ಜೋಡಣೆ (ಡಬ್ಬಿಂಗ್‌) ಆರಂಭವಾಗಲಿದೆ.
ಈ ಚಿತ್ರವನ್ನು ವಿಷ್ಣು ನಾಚನೇಕರ್ ನಿರ್ದೇಶಿಸುತ್ತಿದ್ದಾರೆ.

ಕೆ.ಉದಯಂ ಕಥೆ, ಚಿತ್ರಕಥೆ ಹಾಗೂ ಮಳವಳ್ಳಿ ಸಾಯಿಕೃಷ್ಣ ಸಂಭಾಷಣೆ ಬರೆದಿದ್ದಾರೆ. ವೀನಸ್ ಮೂರ್ತಿ‌ ಛಾಯಾಗ್ರಹಣ, ಅಭಿಷೇಕ್ ಜೆ. ರಾಯ್ ಸಂಗೀತ ನಿರ್ದೇಶನ, ನಾಗರಾಜ‌ ಜಿ‌ ಹರಸೂರ ಸಂಕಲನ, ಅಲ್ಟಿಮೆಟ್ ಶಿವು ಸಾಹಸ ನಿರ್ದೇಶನ ಹಾಗೂ ಹೈಟ್ ಮಂಜು ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ಸಾಕಷ್ಟು ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ನಟಿಸಿರುವ ವಿಶ್ವಾಸ್ ನಾಯಕರಾಗಿ ನಟಿಸುತ್ತಿರುವ ಎರಡನೇ ಚಿತ್ರವಿದು. ಧನ್ಯಶ್ರೀ ನಾಯಕಿಯಾಗಿ ಅಭಿನಯಿಸುತ್ತಿರುವ ಈ ಚಿತ್ರದ ತಾರಾಬಳಗದಲ್ಲಿ ಬಲ ರಾಜವಾಡಿ, ಚಿರಾಯು ಚಕ್ರವರ್ತಿ, ಅಮಿತ್, ಗಿರೀಶ್ ಶಿವಣ್ಣ, ಎಂ.ಎಸ್.ಉಮೇಶ್, ಪದ್ಮಜಾರಾವ್, ಕುರಿಬಾಂಡ್ ರಂಗ, ಮೂಗು ಸುರೇಶ್ ಮುಂತಾದವರಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು