ಬೆಂಗಳೂರು: ನಟ ಸಂಜಯ್ ದತ್ ಅಭಿನಯದ ‘ಕೆಜಿಎಫ್ ಚಾಪ್ಟರ್ 2’ ಸಿನಿಮಾ ಬಿಡುಗಡೆಗೆ ಅವಕಾಶ ನೀಡಬಾರದು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಲು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ಪೀಠ, ‘ಸಿನಿಮಾದಲ್ಲಿ ಸಂಜಯ್ ದತ್ ಅಭಿನಯಿಸುವುದು ಕಾನೂನು ಬಾಹಿರ ಎಂಬುದನ್ನು ಸಾಬೀತುಪಡಿಸುವಲ್ಲಿ ಅರ್ಜಿದಾರರು ವಿಫಲವಾಗಿದ್ದಾರೆ’ ಎಂದು ಅಭಿಪ್ರಾಯಪಟ್ಟಿತು.

ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ಹುಬ್ಬಳ್ಳಿಯ ಸಿದ್ಧಾರೂಢನಗರದ ನಿವಾಸಿ ಜಿ. ಶಿವಶಂಕರ್, ‘ಮುಂಬೈ ಬಾಂಬ್ ಸ್ಫೋಟ ಪ್ರಕರಣದಲ್ಲಿ ಅಪರಾಧಿಯಾಗಿರುವ ಸಂಜಯ್ ದತ್ ಅಭಿನಯಿಸಲು ಈ ಸಿನಿಮಾದಲ್ಲಿ ಅವಕಾಶ ನೀಡಲಾಗಿದೆ. ಹೀಗಾಗಿ ಸಿನಿಮಾ ಬಿಡುಗಡೆಗೆ ಕರ್ನಾಟಕದ ಜನ ವಿರೋಧ ವ್ಯಕ್ತಪಡಿಸುತ್ತಿದ್ದಾರೆ’ ಎಂದು ತಿಳಿಸಿದ್ದಾರೆ.

ಪ್ರಶಾಂತ್ ನೀಲ್ ನಿರ್ದೇಶನದ ಕನ್ನಡದ ‘ಕೆಜಿಎಫ್ ಚಾಪ್ಟರ್ 2’ ಚಿತ್ರದಲ್ಲಿ ಸಂಜಯ್ ದತ್ ‘ಅಧೀರ’ನ ಪಾತ್ರ ನಿರ್ವಹಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.