ಭಾನುವಾರ, ಜೂನ್ 26, 2022
25 °C

ಐಪಿಎಲ್ ಫೈನಲ್‌ನಲ್ಲಿ ಬಿಡುಗಡೆಯಾಗಲಿದೆ ಅಮೀರ್ ಖಾನ್ ಲಾಲ್ ಸಿಂಗ್ ಛಡ್ಡಾ ಟ್ರೈಲರ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ಭಾನುವಾರ ಸಂಜೆ ಗುಜರಾತ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಟಾಟಾ ಐಪಿಎಲ್ 2022 ಫೈನಲ್ ಪಂದ್ಯದಲ್ಲಿ ಅಮೀರ್ ಖಾನ್ ಅಭಿನಯದ ‘ಲಾಲ್ ಸಿಂಗ್ ಛಡ್ಡಾ‘ ಸಿನಿಮಾದ ಟ್ರೈಲರ್ ಬಿಡುಗಡೆಯಾಗಲಿದೆ.

ಗುಜರಾತ್ ಟೈಟನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ಫೈನಲ್ ಪಂದ್ಯ ನಡೆಯಲಿದೆ.

ಮೊದಲ ಇನಿಂಗ್ಸ್‌ನ ಪಂದ್ಯದ ಎರಡನೇ ಟೈಮ್‌ಔಟ್ ಅವಧಿಯಲ್ಲಿ ಲಾಲ್ ಸಿಂಗ್ ಛಡ್ಡಾ ಟ್ರೈಲರ್ ಬಿಡುಗಡೆಯಾಗುತ್ತಿರುವ ಕುರಿತು ನಟ ಅಮೀರ್ ಖಾನ್ ಟ್ವೀಟ್ ಮಾಡಿದ್ದಾರೆ.

ಆಗಸ್ಟ್ 11ರಂದು ಸಿನಿಮಾ ತೆರೆಕಾಣಲಿದೆ.

ಏಪ್ರಿಲ್‌ನಲ್ಲಿ ಲಾಲ್ ಸಿಂಗ್ ಛಡ್ಡಾ ಸಿನಿಮಾ ಬಿಡುಗಡೆಯಾಗಲಿದೆ ಎನ್ನಲಾಗಿತ್ತು. ಆದರೆ ಚಿತ್ರತಂಡ ದಿನಾಂಕವನ್ನು ಮುಂದೂಡಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು