ಬುಧವಾರ, ನವೆಂಬರ್ 30, 2022
17 °C
15 ಚಿತ್ರ ಮಂದಿರಗಳಲ್ಲಿ ಏಕಕಾಲಕ್ಕೆ ಬಿಡುಗಡೆ

18ಕ್ಕೆ ‘ಅಬತರ’ ತುಳು ಸಿನಿಮಾ ತೆರೆಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಬೊಳ್ಳಿ ಮೂವೀಸ್ ಮತ್ತು ಅವಿಕ ಪ್ರೊಡಕ್ಷನ್ ಅಡಿಯಲ್ಲಿ ಅರ್ಜುನ್ ಕಾಪಿಕಾಡ್ ನಿರ್ದೇಶನದ ಬಹುನಿರೀಕ್ಷೆಯ ‘ಅಬತರ’ ತುಳು ಸಿನಿಮಾ ಆ. 18ರಂದು ಕರಾವಳಿ ಜಿಲ್ಲೆಗಳಲ್ಲಿ ತೆರೆಕಾಣಲಿದೆ.

ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಮಾಲ್, ಸಿನಿಪೊಲಿಸ್, ಪಿವಿಆರ್, ಮೂಡುಬಿದಿರೆಯಲ್ಲಿ ಅಮರಶ್ರೀ, ಬೆಳ್ತಂಗಡಿಯಲ್ಲಿ ಭಾರತ್, ಸುರತ್ಕಲ್ನಲ್ಲಿ ನಟರಾಜ್, ಸಿನಿಗ್ಯಾಲಕ್ಸಿ, ಉಡುಪಿಯಲ್ಲಿ ಕಲ್ಪನಾ, ಮಣಿಪಾಲದಲ್ಲಿ ಭಾರತ್ ಸಿನಿಮಾಸ್, ಐನಾಕ್ಸ್, ಕಾರ್ಕಳದಲ್ಲಿ ರಾಧಿಕಾ, ಪ್ಲಾನೆಟ್, ಪುತ್ತೂರಿನಲ್ಲಿ ಅರುಣಾ, ಸುಳ್ಯದಲ್ಲಿ ಸಂತೋಷ್ ಚಿತ್ರಮಂದಿರ ಸೇರಿದಂತೆ ಒಟ್ಟು 15 ಚಿತ್ರ ಮಂದಿರಗಳಲ್ಲಿ ಏಕಕಾಲಕ್ಕೆ ಸಿನಿಮಾ ತೆರೆ ಕಾಣಲಿದೆ ಎಂದು ನಿರ್ದೇಶಕ, ನಟ ಅರ್ಜುನ್ ಕಾಪಿಕಾಡ್ ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ನಂತರ ಮುಂಬೈ, ಬೆಂಗಳೂರು, ಕಾಸರಗೋಡು, ಮುಳ್ಳೇರಿಯ, ಸಕಲೇಶಪುರ, ಶುಂಠಿಕೊಪ್ಪ, ತೀರ್ಥಹಳ್ಳಿ, ಕುಂದಾಪುರ, ಶಿವಮೊಗ್ಗ ಮೊದಲಾದ ಕಡೆಗಳಲ್ಲಿ ಸಿನಿಮಾ ಬಿಡುಗಡೆಗೊಳ್ಳಲಿದೆ. ಆ.16 ಮತ್ತು 17ರಂದು ಮಂಗಳೂರು, ಮೂಡುಬಿದಿರೆ, ಪುತ್ತೂರು, ಉಡುಪಿ, ಪಡುಬಿದ್ರಿ, ಕಿನ್ನಿಗೋಳಿ, ಗುರುಪುರ, ಕುಲಶೇಖರ ಮೊದಲಾದ ಕಡೆಗಳಲ್ಲಿ ಅನಾಥಶ್ರಮದಲ್ಲಿರುವ ಮಕ್ಕಳಿಗೆ ಸಿನಿಮಾವನ್ನು ಉಚಿತವಾಗಿ ಪ್ರದರ್ಶಿಸಲಾಗುವುದು. ಸಿನಿಮಾಕ್ಕೆ ಮಂಗಳೂರು ಸುತ್ತಮುತ್ತ ಒಂದೇ ಹಂತದಲ್ಲಿ ಚಿತ್ರೀಕರಣ ನಡೆಸಲಾಗಿದೆ. ಕೋವಿಡ್‌ನಿಂದಾಗಿ ಚಿತ್ರ ತೆರೆಗೆ ಬರುವುದು ಸ್ವಲ್ಪ ವಿಳಂಬವಾಗಿದೆ ಎಂದರು.

ಹಾಸ್ಯದೊಂದಿಗೆ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಈ ಚಿತ್ರದ ತಾರಾಂಗಣದಲ್ಲಿ ನವೀನ್ ಡಿ. ಪಡೀಲ್, ಅರವಿಂದ ಬೋಳಾರ್, ಭೋಜರಾಜ್ ವಾಮಂಜೂರು, ಸಾಯಿ ಕೃಷ್ಣ, ಶನಿಲ್ ಗುರು, ಚೇತನ್ ರೈ ಮಾಣಿ, ಲಕ್ಷ್ಮೀಶ್, ಸುನಿಲ್ ಚಿತ್ರಾಪುರ ಮತ್ತು ನಾಯಕ ನಟಿಯಾಗಿ ಗಾನ ಭಟ್, ಕ್ರಿಸ್ಟಿನಾ ನಟಿಸಿದ್ದಾರೆ. ಛಾಯಾಗ್ರಾಹಕರಾಗಿ ವಿಷ್ಣು ಪ್ರಸಾದ್, ಜೇಕೋಬ್, ಕಾರ್ಯಕಾರಿ ನಿರ್ಮಾಪಕರಾಗಿ ಸಂದೀಪ್ ಶೆಟ್ಟಿ ಕೆಲಸ ಮಾಡಿದ್ದಾರೆ. ನಿಖಿಲ್ ಸಾಲ್ಯಾನ್ ನಿರ್ಮಾಪಕರಾಗಿದ್ದು, ವೀರಾಜ್ ಅತ್ತಾವರ ಸಹ ನಿರ್ಮಾಪಕರಾಗಿದ್ದಾರೆ. ಸಿನಿಮಾದಲ್ಲಿರುವ ‘ಬಿನ್ನೆರ್ ಬೈದಿನ’ ಹಾಡು ಚಿತ್ರ ಬಿಡುಗಡೆಗೂ ಮುನ್ನವೇ ಯೂಟ್ಯೂಬ್‌ನಲ್ಲಿ 5 ಲಕ್ಷಕ್ಕೂ ಹೆಚ್ಚು ವೀಕ್ಷಣೆಯಾಗಿದೆ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು