ಯಂಗ್ ರೆಬೆಲ್ ಸ್ಟಾರ್, ನಟ ಅಭಿಷೇಕ್ ಅಂಬರೀಷ್ ಶೀಘ್ರದಲ್ಲೇ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಅಭಿಷೇಕ್ ಅಂಬರೀಷ್ ಹಾಗು ಮಾಡೆಲ್ ಅವಿವಾ ಬಿದ್ದಪ್ಪ ಅವರ ನಿಶ್ಚಿತಾರ್ಥ ಭಾನುವಾರ(ಡಿ.11) ನಡೆದಿದ್ದು, ಚಾಲೆಂಜಿಂಗ್ ಸ್ಟಾರ್ ದರ್ಶನ್, ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಚಿತ್ರರಂಗದ ಹಲವು ಗಣ್ಯರು ಜೋಡಿಗೆ ಶುಭ ಹಾರೈಸಿದರು.