ಶುಕ್ರವಾರ, 9 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳವಾರ ರಜಾದಿನ ಚಿತ್ರದ ಹಾಡು ಬಿಡುಗಡೆ ಮಾಡಿದ ಅಭಿಷೇಕ್ ಅಂಬರೀಶ್‌

Last Updated 26 ಜನವರಿ 2021, 12:55 IST
ಅಕ್ಷರ ಗಾತ್ರ

ಬಿಗ್‌ಬಾಸ್‌ ಖ್ಯಾತಿಯ ಚಂದನ್ ಆಚಾರ್ ಅಭಿನಯದ ‘ಮಂಗಳವಾರ ರಜಾದಿನ’ ಚಿತ್ರದ ‘ನೀನೆ ಗುರು, ನೀನೆ ಗುರಿ, ನೀನೆ ಗುರುತು’ ಹಾಡನ್ನು ನಟ ಅಭಿಷೇಕ್ ಅಂಬರೀಶ್ ಗಣರಾಜ್ಯೋತ್ಸವದ ದಿನ ಬಿಡುಗಡೆ ಮಾಡಿದ್ದಾರೆ.

ತಂದೆ–ಮಗನ ಭಾಂದವ್ಯದ ಈ ಹಾಡನ್ನು ಗೌಸ್‌ಫೀರ್ ಬರೆದಿದ್ದಾರೆ. ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಹಾಡಿಗೆ ದನಿಯಾಗಿದ್ದಾರೆ.

‘ಈ ಹಾಡು ಕೇಳಿದ ಎಲ್ಲರಿಗೂ ಅವರ ತಂದೆ ನೆನಪಾಗುತ್ತಾರೆ. ಇಡೀ ಚಿತ್ರತಂಡಕ್ಕೆ ಒಳ್ಳೆಯದಾಗಲಿ’ ಎಂದು ಶುಭ ಕೋರಿದ್ದಾರೆ.

ತ್ರಿವರ್ಗ ಫಿಲಂಸ್ ‌ನಿರ್ಮಾಣದ, ಯುವಿನ್ ನಿರ್ದೇಶಿಸಿರುವ ಈ ಚಿತ್ರ ಇದೇ ಫೆಬ್ರವರಿ 5 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಲಹರಿ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿರುವ ಈ ಹಾಡಿಗೆ ಋತ್ವಿಕ್ ಮುರಳಿಧರ್ ಸಂಗೀತ ನೀಡಿದ್ದು, ಈಗಾಗಲೇ ಅಪಾರ ಸಂಖ್ಯೆಯಲ್ಲಿ ವೀಕ್ಷಣೆಗೊಂಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT