ನವದೆಹಲಿ: ತಮ್ಮ ಪ್ರಚಾರ ಮತ್ತು ವ್ಯಕ್ತಿತ್ವದ ಹಕ್ಕುಗಳನ್ನು ರಕ್ಷಿಸುವಂತೆ ಕೋರಿ ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಬುಧವಾರ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ವೆಬ್ಸೈಟ್ಗಳು ಮತ್ತು ಆನ್ಲೈನ್ ವೇದಿಕೆಗಳು ತಮ್ಮ ಚಿತ್ರ, ಹೋಲಿಕೆ ಇರುವ ಚಿತ್ರ, ವ್ಯಕ್ತಿತ್ವ ಮತ್ತು ಲೈಂಗಿಕತೆಗೆ ಸಂಬಂಧಿಸಿದ ಕಂಟೆಂಟ್ಗಳೂ ಒಳಗೊಂಡಂತೆ ನಕಲಿ ವಿಡಿಯೊಗಳನ್ನು ಬಳಸದಂತೆ ನಿರ್ಬಂಧ ಹೇರುವಂತೆ ಒತ್ತಾಯಿಸಿದ್ದಾರೆ.

ಈ ನಡುವೆ ನ್ಯಾಯಮೂರ್ತಿ ತೇಜಸ್ ಕರಿಯಾ ಅವರ ಪೀಠವು ಬಚ್ಚನ್ ಪರ ವಕೀಲರಿಗೆ ಕೆಲ ಪ್ರಶ್ನೆಗಳನ್ನು ಹಾಕಿದ್ದು, ಅವುಗಳಿಗೆ ಉತ್ತರಿಸುವಂತೆ ಸೂಚಿಸಿದ್ದಾರೆ. ಈ ಬಗ್ಗೆ ಮಧ್ಯಾಹ್ನ 2:30ಕ್ಕೆ ವಿಚಾರಣೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಪ್ರತಿವಾದಿಗಳು ನಟನ ಕೃತಕ ಬುದ್ಧಿಮತ್ತೆ ಆಧಾರಿತ ವಿಡಿಯೊಗಳು, ಸಹಿ ಮಾಡಿದ ನಕಲಿ ಫೋಟೊಗಳು ಹಾಗೂ ಲೈಂಗಿಕತೆಗೆ ಸಂಬಂಧಿಸಿದ ಕಂಟೆಂಟ್ಗಳನ್ನು ರಚಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಅಭಿಷೇಕ್ ಪತ್ನಿ, ಬಾಲಿವುಡ್ ನಟಿ ಐಶ್ವರ್ಯಾ ರೈ ಸಹ ತಮ್ಮ ವ್ಯಕ್ತಿತ್ವದ ಹಕ್ಕುಗಳನ್ನು ರಕ್ಷಿಸುವಂತೆ ಕೋರಿ ಮಂಗಳವಾರ ದೆಹಲಿ ಹೈಕೋರ್ಟ್ಗೆ ಮನವಿ ಸಲ್ಲಿಸಿದ್ದರು.
.ವ್ಯಕ್ತಿತ್ವದ ಹಕ್ಕು ರಕ್ಷಣೆ ಕೋರಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಐಶ್ವರ್ಯಾ ರೈ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.