‘ಪ್ರಶಾಂತ್ ಪೂಜಾರಿ ಅವರು ಧ್ರುವ ಸರ್ಜಾಗೆ ಆಪ್ತರಾಗಿದ್ದರು. ಇಬ್ಬರ ನಡುವಿನ ಆಪ್ತತೆಯನ್ನು ನಾಗೇಂದ್ರ ಹಾಗೂ ಅಶ್ವಿನ್‌ಗೆ ಸಹಿಸಿಕೊಳ್ಳಲು ಆಗುತ್ತಿರಲಿಲ್ಲ. ಹಾಗಾಗಿ ಮೇ 26ರ ರಾತ್ರಿ ಬೈಕ್‌ನಲ್ಲಿ ಬಂದ ಹರ್ಷ ಮತ್ತು ಸುಭಾಷ್, ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಪ್ರಶಾಂತ್ ಮೇಲೆ ಬೇಸ್‌ಬಾಲ್ ಬ್ಯಾಟ್, ಮಚ್ಚಿನಿಂದ ಹಲ್ಲೆ ಮಾಡಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಈ ಬಗ್ಗೆ ಪ್ರಶಾಂತ್ ದೂರು ನೀಡಿದ್ದರು. ಹಲ್ಲೆ ಮಾಡಿಸಿದ್ದು ಧ್ರುವ ಸರ್ಜಾ ಬಳಿ ಕೆಲಸ ಮಾಡಿಕೊಂಡಿದ್ದ ನಾಗೇಂದ್ರ ಎಂಬುದಾಗಿ ಹಾಗೂ ನಾಗೇಂದ್ರಗೆ ಬೆಂಬಲ ನೀಡಿದ್ದು ಅಶ್ವಿನ್ ಎಂಬ ಆರೋಪ ಕೇಳಿ ಬಂದಿತ್ತು’ ಎಂದು ಪೊಲೀಸರು ತಿಳಿಸಿದ್ದಾರೆ.