ಸೋಮವಾರ, ಜುಲೈ 4, 2022
21 °C

‘ಆ್ಯಕ್ಟ್ 1978’ ನವೆಂಬರ್‌ನಲ್ಲಿ ತೆರೆಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಜ್ಞಾ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ಆ್ಯಕ್ಟ್ 1978’ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಯಾವುದೇ ಕಟ್ ಇಲ್ಲದೇ ‘ಯು’ ಪ್ರಮಾಣ ಪತ್ರ ನೀಡಿದ್ದು, ಈ ಚಿತ್ರವನ್ನು ನವೆಂಬರ್‌ನಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ.

ಸಿನಿಮಾ ಮಂದಿರಕ್ಕೆ ಪ್ರೇಕ್ಷಕರು ಬರುತ್ತಾರೋ, ಇಲ್ಲವೋ ಅನ್ನುವ ಆತಂಕದ ಮಧ್ಯೆ ಅನೇಕರು ಈಗಾಗಲೇ ಬಿಡುಗಡೆಯಾದ ಚಿತ್ರಗಳನ್ನು ಮರು ಬಿಡುಗಡೆ ಮಾಡಿದ್ದಾರೆ. ಆತಂಕದ ನಡುವೆಯೂ ಜನರು ಉತ್ಸಾಹದಿಂದ ಬರುತ್ತಿದ್ದಾರೆ. ಜನರ ಪ್ರತಿಕ್ರಿಯೆ ಕಂಡು ನಮಗೂ ವಿಶ್ವಾಸ ಮೂಡಿದ್ದು, ‘ಆ್ಯಕ್ಟ್ 1978’ ಸಿನಿಮಾವನ್ನು ಇದೇ ನವೆಂಬರ್‌ನಲ್ಲಿ ರಿಲೀಸ್ ಮಾಡಲು ಸಿದ್ಧತೆ ಮಾಡಿಕೊಂಡಿದ್ದೇವೆ. ನವೆಂಬರ್ 1, ಅಂದರೆ ಕನ್ನಡ ರಾಜ್ಯೋತ್ಸವದಂದು ಸಿನಿಮಾ ಬಿಡುಗಡೆಯ ದಿನಾಂಕವನ್ನು ಅಧಿಕೃತವಾಗಿ ಪ್ರಕಟಿಸಲಿದ್ದೇವೆ’ ಎಂದು ಚಿತ್ರದ ನಿರ್ದೇಶಕ ಮಂಸೋರೆ ತಿಳಿಸಿದ್ದಾರೆ.

ದೇವರಾಜ್ ಆರ್. ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ತಾರಾಗಣದಲ್ಲಿ ಸಂಚಾರಿ ವಿಜಯ್, ಬಿ.ಸುರೇಶ್, ಪ್ರಮೋದ್ ಶೆಟ್ಟಿ, ಅಚ್ಯುತ್ ಕುಮಾರ್, ಕೃಷ್ಣಾ ಹೆಬ್ಬಾಳೆ, ಶ್ರುತಿ, ದತ್ತಣ್ಣ, ಶರಣ್ಯ, ಶೋಭರಾಜ್, ಅವಿನಾಶ್, ರಾಘು ಶಿವಮೊಗ್ಗ ಇದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು