ಮಂಗಳವಾರ, ಆಗಸ್ಟ್ 9, 2022
23 °C

ಮಗಳ ಮತ್ತೊಂದು ಚಿತ್ರಕ್ಕೆ 'ಆ್ಯಕ್ಷನ್ ಕಿಂಗ್' ಅರ್ಜುನ್ ಸರ್ಜಾ ಆ್ಯಕ್ಷನ್‌ ಕಟ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಹುಭಾಷಾ ನಟ 'ಆ್ಯಕ್ಷನ್ ಕಿಂಗ್' ಅರ್ಜುನ್ ಸರ್ಜಾ ಮತ್ತೆ ನಿರ್ದೇಶನಕ್ಕಿಳಿದಿದ್ದಾರೆ. ತಮ್ಮ ಅಭಿನಯದ ಮೂಲಕ ಅಭಿಮಾನಿಗಳನ್ನು, ಪ್ರೇಕ್ಷಕರನ್ನು ರಂಜಿಸುತ್ತಿದ್ದ ಸರ್ಜಾ, ಇದೀಗ ಮತ್ತೊಮ್ಮೆ ಮಗಳು ಐಶ್ವರ್ಯ ಅರ್ಜುನ್‌ ಸಿನಿಮಾಗೆ ಆ್ಯಕ್ಷನ್‌ ಕಟ್ ಹೇಳಲಿದ್ದಾರೆ.

‘ಪ್ರೇಮ ಬರಹ’ ಸಿನಿಮಾ ಮೂಲಕ ನಾಯಕಿಯಾಗಿ ಚಂದನವನಕ್ಕೆ ಐಶ್ವರ್ಯ ಹೆಜ್ಜೆ ಇಟ್ಟಿದ್ದರು. ಈ ಸಿನಿಮಾವನ್ನೂ ಅರ್ಜುನ್ ಸರ್ಜಾ ನಿರ್ದೇಶಿಸಿದ್ದರು. ಕಥೆ, ಚಿತ್ರಕಥೆ, ಸಂಭಾಷಣೆ ಹಾಗೂ ನಿರ್ದೇಶನದ ಜವಾಬ್ದಾರಿಯ ಜೊತೆಗೆ, ನಿರ್ಮಾಣದ ಜವಾಬ್ದಾರಿಯನ್ನೂ ಸರ್ಜಾ ಹೊತ್ತುಕೊಂಡಿದ್ದರು. ಇದಾದ ಬಳಿಕ ಬಳಿಕ ಐಶ್ವರ್ಯ ಯಾವುದೇ ಸಿನಿಮಾದಲ್ಲಿ ನಟಿಸಿರಲಿಲ್ಲ. ಈಗ ಮತ್ತೆ ಅರ್ಜುನ್ ಸರ್ಜಾ ಮಗಳ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳುವುದರ ಜೊತೆಗೆ ನಿರ್ಮಾಣಕ್ಕೂ ಇಳಿದಿದ್ದಾರೆ.

ಇನ್ನೂ ಶೀರ್ಷಿಕೆಯಿಡದ ಈ ಚಿತ್ರ ತೆಲುಗಿನಲ್ಲಿ ನಿರ್ಮಾಣವಾಗುತ್ತಿದ್ದು, ಚಿತ್ರದ ಮುಹೂರ್ತ ಇತ್ತೀಚೆಗೆ ನಡೆಯಿತು. ತೆಲುಗಿನ ಖ್ಯಾತ ನಟ ಪವನ್ ಕಲ್ಯಾಣ್ ಚಿತ್ರಕ್ಕೆ ಕ್ಲ್ಯಾಪ್‌ ಮಾಡಿ ಶುಭಹಾರೈಸಿದರು. 

ಅರ್ಜುನ್, ತಮ್ಮದೇ ಶ್ರೀ ರಾಮ್ ಫಿಲ್ಮ್ಸ್ ಇಂಟರ್‌ನ್ಯಾಷನಲ್‌ ಬ್ಯಾನರ್‌ನಡಿಯಲ್ಲಿ ನಿರ್ಮಿಸಲಿರುವ 15ನೇ ಸಿನಿಮಾದ ಮೂಲಕ ಐಶ್ವರ್ಯ ಅರ್ಜುನ್ ಅವರನ್ನು ತೆಲುಗಿನಲ್ಲಿ ನಾಯಕಿಯಾಗಿ ಪರಿಚಯಿಸುತ್ತಿದ್ದಾರೆ. ಐಶ್ವರ್ಯಗೆ ಜೋಡಿಯಾಗಿ ತೆಲುಗು ಚಿತ್ರರಂಗದ ಯುವ ನಟ ವಿಶ್ವಕ್ ಸೇನ್ ಅಭಿನಯಿಸುತ್ತಿದ್ದಾರೆ.

ವಿಶ್ವಕ್ ಸೇನ್ ನಟಿಸಿ ನಿರ್ದೇಶಿಸಿದ್ದ ‘ಫಲಕ್ನುಮಾ ದಾಸ್’ ಸಿನಿಮಾ ಭರ್ಜರಿ ಯಶಸ್ಸು ಕಂಡಿತ್ತು. ಸದ್ಯ ‘ದಾಸ್ ಕಾ ಧಮ್ಕಿ’ ಎಂಬ ಸಿನಿಮಾದ ಚಿತ್ರೀಕರಣದಲ್ಲಿ ವಿಶ್ವಕ್‌ ತೊಡಗಿಸಿಕೊಂಡಿದ್ದಾರೆ. ಈ ಸಿನಿಮಾ ಜೊತೆಯಲ್ಲೀಗ ಹೊಸ ಚಿತ್ರವನ್ನು ವಿಶ್ವಕ್ ಒಪ್ಪಿಕೊಂಡಿದ್ದಾರೆ. ಚಿತ್ರದಲ್ಲಿ ಖಳನಾಯಕನ ಪಾತ್ರದಲ್ಲಿ ಬಹುಭಾಷಾ ನಟ ಜಗಪತಿ ಬಾಬು ನಟಿಸಲಿದ್ದಾರೆ.

‘ಇದೊಂದು ರೋಡ್ ಟ್ರಿಪ್ ಸಿನಿಮಾವಾಗಿದ್ದು, ಶೀಘ್ರದಲ್ಲಿಯೇ ಚಿತ್ರೀಕರಣ ಆರಂಭವಾಗಲಿದೆ. ಉಳಿದ ಪಾತ್ರ ವರ್ಗವನ್ನು ಶೀಘ್ರದಲ್ಲೇ ಪರಿಚಯಿಸಲಿದ್ದೇವೆ’ ಎಂದಿದೆ ಚಿತ್ರತಂಡ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು