ಭಾನುವಾರ, ಸೆಪ್ಟೆಂಬರ್ 25, 2022
22 °C

ಮುಂಬೈ: ನಗ್ನ ಚಿತ್ರ ಪ್ರಕಟಿಸಿದ ರಣವೀರ್ ಸಿಂಗ್ ವಿರುದ್ಧ ಪೊಲೀಸರಿಗೆ ದೂರು

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ತಮ್ಮ ನಗ್ನ ಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವ ಮೂಲಕ ಬಾಲಿವುಡ್ ನಟ ರಣವೀರ್ ಸಿಂಗ್ ಮಹಿಳೆಯರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಅವರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಎಂದು ಮುಂಬೈ ಪೊಲೀಸರಿಗೆ ಅರ್ಜಿಯೊಂದು ಸಲ್ಲಿಕೆಯಾಗಿರುವುದಾಗಿ ಅಧಿಕಾರಿಗಳು ಸೋಮವಾರ ಮಾಹಿತಿ ನೀಡಿದ್ದಾರೆ.

ಪೂರ್ವ ಮುಂಬೈ ಉಪನಗರ ಮೂಲದ ಸ್ವಯಂಸೇವಾ ಸಂಸ್ಥೆಯೊಂದರ (ಎನ್‌ಜಿಒ) ಕಾರ್ಯಕರ್ತರೊಬ್ಬರು ಚೆಂಬೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ತಮ್ಮ ನಗ್ನ ಚಿತ್ರಗಳನ್ನು ಪೋಸ್ಟ್ ಮಾಡುವ ಮೂಲಕ ರಣವೀರ್ ಸಿಂಗ್ ಮಹಿಳೆಯರ ಭಾವನಗಳಿಗೆ ಧಕ್ಕೆ ಉಂಟು ಮಾಡಿರುವುದಲ್ಲದೆ, ಅವರ ಘನತೆಗೆ ಕುಂದು ಉಂಟಾಗುವಂತೆ ಮಾಡಿದ್ದಾರೆ ಎಂಬುದಾಗಿ ದೂರುದಾರರು ಉಲ್ಲೇಖಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾಹಿತಿ ತಂತ್ರಜ್ಞಾನ ಕಾಯ್ದೆ ಹಾಗೂ ಭಾರತೀಯ ದಂಡಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ನಟನ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ದೂರುದಾರರು ಒತ್ತಾಯಿಸಿದ್ದಾರೆ.

ಈವರೆಗೆ ಎಫ್‌ಐಆರ್ ದಾಖಲಿಸಿಲ್ಲ. ವಿವರ ತಿಳಿಯುತ್ತಿದ್ದೇವೆ ಎಂದು ಅಧಿಕಾರಿ ತಿಳಿಸಿದ್ದಾರೆ.

ರಣವೀರ್ ಸಿಂಗ್ ಇತ್ತೀಚೆಗೆ ನಿಯತಕಾಲಿಕೆಯೊಂದರ ಫೋಟೊಶೂಟ್‌ಗೆ ಬೆತ್ತಲೆಯಾಗಿ ಕಾಣಿಸಿಕೊಂಡು ಸುದ್ದಿಯಾಗಿದ್ದರು. ತಮ್ಮ ನಗ್ನ ಫೋಟೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿಯೂ ಪ್ರಕಟಿಸಿದ್ದರು. ಇದು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಗೆ ಗ್ರಾಸವಾಗಿತ್ತು.

ಇದೀಗ ರಣವೀರ್ ಸಿಂಗ್‌ ಅವರಿಂದ ಪ್ರೇರಿತರಾಗಿ ತಮಿಳು ನಟ ವಿಷ್ಣು ವಿಶಾಲ್ ಕೂಡ ಬೆತ್ತಲೆ ಫೋಟೊಶೂಟ್ ಮಾಡಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು