ಆದಿತ್ಯ ನಾಯಕರಾಗಿ ನಟಿಸಿರುವ, ರಂಜನ್ ಶಿವರಾಮ್ ನಿರ್ದೇಶನದ ಹೊಸ ಚಿತ್ರ ‘ಟೆರರ್’ ಬಿಡುಗಡೆಗೆ ಸಜ್ಜಾಗುತ್ತಿದೆ. ಚಿತ್ರದ ಎರಡನೇ ಹಾಡು ‘ಹರ ಹರ ಮಹಾದೇವ’ ಇತ್ತೀಚೆಗೆ ಬಿಡುಗಡೆಗೊಂಡಿತು.

ಸಿಲ್ಕ್ ಮಂಜು ನಿರ್ಮಾಣ ಮಾಡಿರುವ ಈ ಸಿನಿಮಾ ಇದೇ ಮಾಸಾಂತ್ಯದಲ್ಲಿ ಅಥವಾ ಜೂನ್ ಮೊದಲ ವಾರದಲ್ಲಿ ರಿಲೀಸ್ ಆಗಲಿದೆ. ‘ಹರ ಹರ ಮಹಾದೇವ’ ಹಾಡಿಗೆ ವಿ.ನಾಗೇಂದ್ರಪ್ರಸಾದ್ ಸಾಹಿತ್ಯ ಬರೆದಿದ್ದು, ಹರ್ಷವರ್ಧನ್ ರಾಜ್ ಸಂಗೀತ ನೀಡಿದ್ದಾರೆ.

‘ಶ್ರೀನಗರ ಕಿಟ್ಟಿ, ದೇವರಾಜ್, ಶಶಿಕುಮಾರ್, ಕುಮಾರ್ ಬಂಗಾರಪ್ಪ, ಶರತ್ ಲೋಹಿತಾಶ್ವ, ಧರ್ಮ, ಕೋಟೆ ಪ್ರಭಾಕರ್ ಹೀಗೆ ಹಿರಿಯ ಹಾಗೂ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಚಿತ್ರದಲ್ಲಿದ್ದು, ಭಿನ್ನವಾದ ಕಥೆಯನ್ನು ಸಿನಿಮಾ ಹೊಂದಿದೆ’ ಎಂದಿದ್ದಾರೆ ಆದಿತ್ಯ. ‘ಚಿತ್ರಕ್ಕೆ ನಾನೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದೇನೆ. ಸದ್ಯ ಚಿತ್ರಕ್ಕೆ ಹಿನ್ನೆಲೆ ಸಂಗೀತ ಅಳವಡಿಸಲಾಗುತ್ತಿದೆ’ ಎಂದು ರಂಜನ್ ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.