ಹೈದರಾಬಾದ್: ತೆಲಂಗಾಣದ ಖಮ್ಮಂ ಜಿಲ್ಲೆಯಲ್ಲಿ ತೆಲುಗು ಚಲನಚಿತ್ರ ನಟ ಅಲ್ಲು ಅರ್ಜುನ್ ಅವರ ವ್ಯಾನಿಟಿ ವ್ಯಾನ್ಗೆ ಕಂಟೇನರ್ ಲಾರಿ ಡಿಕ್ಕಿ ಹೊಡೆದಿದ್ದು, ವಾಹನದಲ್ಲಿದ್ದ ಚಾಲಕ ಮತ್ತು ಅಟೆಂಡೆಂಟ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಶನಿವಾರ ಸತ್ಯನಾರಾಯಣಪುರಂನಲ್ಲಿ ಹಿಂದಿನಿಂದ ಬರುತ್ತಿದ್ದ ಲಾರಿ ವ್ಯಾನ್ಗೆ ಡಿಕ್ಕಿ ಹೊಡೆದಿದ್ದು, ಸಣ್ಣಪುಟ್ಟ ಹಾನಿಯಾಗಿದೆ. ಘಟನೆ ನಡೆದಾಗ ನಟ ಅಥವಾ ಅವರ ಮೇಕಪ್ ತಂಡವೂ ವ್ಯಾನಿಟಿ ವ್ಯಾನ್ನಲ್ಲಿ ಇರಲಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಚಲನಚಿತ್ರದ ಚಿತ್ರೀಕರಣದ ಸ್ಥಳದಿಂದ ಹಿಂತಿರುಗುತ್ತಿದ್ದ ವಾಹನದಲ್ಲಿ ಚಾಲಕನಲ್ಲದೆ, ಒಬ್ಬ ಅಟೆಂಡೆಂಟ್ ಇದ್ದರು. ವ್ಯಾನ್ ಚಾಲಕನ ದೂರಿನ ಆಧಾರದ ಮೇಲೆ, ಕಂಟೇನರ್ ಲಾರಿಯ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಇತ್ತೀಚೆಗೆ ಮುಂಬರುವ 'ಪುಷ್ಪಾ' ಚಿತ್ರದ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ಆಂಧ್ರಪ್ರದೇಶದಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.