ಗುರುವಾರ , ಮೇ 13, 2021
39 °C

ನನಗೆ ಕೋವಿಡ್‌ ಇಲ್ಲ: ನಟ ಅನಿರುದ್ಧ ಸ್ಪಷ್ಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ನಟ ಅನಿರುದ್ಧ ಅವರಿಗೆ ಕೋವಿಡ್‌–19 ದೃಢಪಟ್ಟಿದೆ ಎಂಬ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸಂದರ್ಭದಲ್ಲೇ ಈ ಕುರಿತು ಸ್ವತಃ ಅನಿರುದ್ಧ ಅವರೇ ಸ್ಪಷ್ಟನೆ ನೀಡಿದ್ದಾರೆ. ‘ನಾನು ಆರೋಗ್ಯವಾಗಿದ್ದೇನೆ, ನನಗೆ ಏನೂ ಆಗಿಲ್ಲ’ ಎಂದು ಅವರು ಇನ್‌ಸ್ಟಾಗ್ರಾಂನಲ್ಲಿ ವಿಡಿಯೊ ಅಪ್‌ಲೋಡ್‌ ಮಾಡಿದ್ದಾರೆ.

‘ನನಗೆ ಕೊರೊನಾ ಸೋಂಕು ಬಂದಿದೆ ಎಂದು ಸೋಮವಾರ ಮಧ್ಯಾಹ್ನದಿಂದ ಸಾಮಾಜಿಕ ಜಾಲತಾಣಗಳಲ್ಲಿ ವದಂತಿ ಹರಡುತ್ತಿದೆ. ನನಗೆ ಏನೂ ಆಗಿಲ್ಲ. ನಾನು ಆರೋಗ್ಯವಾಗಿದ್ದೇನೆ. ಜನರ ಆಶೀರ್ವಾದ ಇರುವವರೆಗೂ ನನಗೆ ಏನೂ ಆಗುವುದಿಲ್ಲ. ನನ್ನ ಪರಿಚಯದ ಹಲವರು, ಸ್ನೇಹಿತರು ಐಸಿಯು ವ್ಯವಸ್ಥೆ ಕಲ್ಪಿಸಿಕೊಡಿ, ಔಷಧಿ ವ್ಯವಸ್ಥೆ ಮಾಡಿ ಎಂದು ಸಹಾಯ ಕೋರಿ ಕರೆ ಮಾಡುತ್ತಿದ್ದಾರೆ. ಹೀಗಾಗಿ ನಾನು ಹಲವರಿಗೆ ಕರೆ ಮಾಡಿದ್ದೆ. ನನಗೇ ಕೋವಿಡ್‌ ದೃಢಪಟ್ಟಿದೆ ಎಂದು ಹಲವರು ಭಾವಿಸಿದಂತಿದೆ. ಎಲ್ಲರಿಗೂ ಆಯಸ್ಸು, ಆರೋಗ್ಯ ನೀಡುವಂತೆ ನಾನು ಪ್ರಾರ್ಥಿಸುತ್ತೇನೆ’ ಎಂದು ವಿಡಿಯೊದಲ್ಲಿ ಅನಿರುದ್ಧ ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು