ಮುಂಬೈ: ಬಾಲಿವುಡ್ ನಟ ಅರ್ಜುನ್ ರಾಮ್ಪಾಲ್ ಅವರು ಶುಕ್ರವಾರ ಮಾದಕವಸ್ತು ನಿಯಂತ್ರಣ ದಳದ (ಎನ್ಸಿಬಿ) ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.

ಈ ಹಿಂದೆ ಅರ್ಜುನ್ ರಾಮ್ಪಾಲ್ ಅವರಿಗೆ ಬುಧವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು.

ದಕ್ಷಿಣ ಮುಂಬೈನ ಬಾರ್ಲಾಡ್ ಎಸ್ಟೇಟ್ನಲ್ಲಿರುವ ಎನ್ಸಿಬಿ ಕಚೇರಿಯಲ್ಲಿ ಬೆಳಿಗ್ಗೆ 11 ಗಂಟೆಗೆ ಅವರು ಬಂದರು. ಬಾಲಿವುಡ್ ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದಂತೆ ಎನ್ಸಿಬಿ ಅಧಿಕಾರಿಗಳು ಅವರನ್ನು ವಿಚಾರಿಸಿದರು ಎಂದು ಅಧಿಕಾರಿಗಳು ತಿಳಿಸಿದರು.

ಇದನ್ನೂ ಓದಿ:ನಟ ಅರ್ಜುನ್ ರಾಮ್ಪಾಲ್ ಮುಂಬೈ ನಿವಾಸದ ಮೇಲೆ ಎನ್ಸಿಬಿ ದಾಳಿ

ಅರ್ಜುನ್ ಗೆಳತಿ ಗ್ಯಾಬ್ರಿಯೆಲಾ ಅವರನ್ನು ಸತತ ಎರಡು ದಿನ ಎನ್ಸಿಬಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು.

ಬಾಲಿವುಡ್ ಡ್ರಗ್ಸ್ ಜಾಲ ಪ್ರಕರಣದಡಿ ನಟ ಅರ್ಜುನ್ ರಾಮ್ಪಾಲ್ ಅವರ ಮುಂಬೈ ನಿವಾಸದ ಮೇಲೆ ಎನ್ಸಿಬಿ ಅಧಿಕಾರಿಗಳು ಸೋಮವಾರ ದಾಳಿ ನಡೆಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.