ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂದೂ, ಕ್ರಿಶ್ಚಿಯನ್, ಇಸ್ಲಾಂ ಆಮದು ಮಾಡಿಕೊಂಡ ಧರ್ಮಗಳು: ನಟ ಚೇತನ್ ಮತ್ತೆ ಕಿಡಿ

Last Updated 20 ಅಕ್ಟೋಬರ್ 2022, 10:02 IST
ಅಕ್ಷರ ಗಾತ್ರ

ಬೆಂಗಳೂರು: ಭೂತಕೋಲ ಹಿಂದೂ ಸಂಸ್ಕೃತಿಯಲ್ಲ ಎಂಬ ಹೇಳಿಕೆ ಮೂಲಕ ಸಂಚಲನ ಮೂಡಿಸಿರುವ ‘ಆ ದಿನಗಳು’ ಖ್ಯಾತಿಯ ಚೇತನ್, ಇದೀಗ ಮತ್ತೆ ಧರ್ಮಗಳ ಬಗ್ಗೆ ಟ್ವೀಟ್ ಮಾಡುವ ಮೂಲಕ ಸುದ್ದಿಯಲ್ಲಿದ್ದಾರೆ.

‘ಕಾಂತಾರ’ ಸಿನಿಮಾದಲ್ಲಿ ಹೇಳಲಾದ ಕೆಲ ವಿಚಾರಗಳ ಬಗ್ಗೆ ಇತ್ತೀಚೆಗೆ ಚೇತನ್ ಆಕ್ಷೇಪ ವ್ಯಕ್ತಪಡಿಸಿದ್ದರು. ಭೂತಕೋಲ ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ರಿಷಬ್ ಶೆಟ್ಟಿ ಸಂದರ್ಶನದಲ್ಲಿ ಹೇಳಿದ್ದರು. ಆದರೆ, ಇದನ್ನು ಚೇತನ್ ವಿರೋಧಿಸಿದ್ದರು.

‘ಭಾರತವು ವೈವಿಧ್ಯಮಯವಾದ ಮತ್ತು ರೋಮಾಂಚಕವಾದ ಸಾಂಸ್ಕೃತಿಕ ಹಾಗೂ ಧಾರ್ಮಿಕ ಸಂಪ್ರದಾಯಗಳನ್ನು ಹೊಂದಿದೆ. ನಮ್ಮ ಆದಿವಾಸಿ, ಅಲೆಮಾರಿ ಮೂಲನಿವಾಸಿ ವಿಶ್ವಗಳನ್ನು ಸಂರಕ್ಷಿಸುವ ಮತ್ತು ಗುರುತಿಸುವ ಆಂದೋಲನವು ನಡೆಯುತ್ತಿದೆ. ಹಿಂದೂ ಧರ್ಮ, ಕ್ರಿಶ್ಚಿಯನ್ ಧರ್ಮ ಮತ್ತು ಇಸ್ಲಾಂ ಧರ್ಮ ಇಂತಹ ‘ಆಮದು ಮಾಡಿಕೊಂಡ’ ಧರ್ಮಗಳು ಇತರ ಎಲ್ಲಾ ಧರ್ಮಗಳಂತೆಯೇ ಅವಿಭಾಜ್ಯವಾಗಿವೆ. ಎಲ್ಲಾ ಅಸಮಾನತೆಗಳನ್ನು ನಾವು ವಿರೋಧಿಸಬೇಕು’ ಎಂದು ಚೇತನ್ ಟ್ವೀಟ್ ಮಾಡಿದ್ದಾರೆ.

ಇತ್ತೀಚೆಗೆ ‘ಕಾಂತಾರ’ ಚಿತ್ರದ ಬಗ್ಗೆ ಟ್ವೀಟ್‌ ಮಾಡಿದ್ದ ಚೇತನ್, ‘ನಮ್ಮ ಕನ್ನಡ ಚಿತ್ರ ‘ಕಾಂತಾರ’ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿ ತಂದಿದೆ. ಆದರೆ, ಭೂತಕೋಲ ಹಿಂದೂ ಸಂಸ್ಕೃತಿ ಎಂದು ಹೇಳಿರುವ ನಿರ್ದೇಶಕ ರಿಷಬ್ ಶೆಟ್ಟಿ ಅವರ ಮಾತು ಸುಳ್ಳು. ನಮ್ಮ ಪಂಬದ, ನಲಿಕೆ, ಪರವರ ಬಹುಜನ ಸಂಪ್ರದಾಯಗಳು. ವೈದಿಕ-ಬ್ರಾಹ್ಮಣೀಯ ಹಿಂದೂ ಧರ್ಮಕ್ಕಿಂತ ಹಿಂದಿನವು. ಮೂಲನಿವಾಸಿ ಸಂಸ್ಕೃತಿಗಳನ್ನು ಪರದೆಯ ಮೇಲೆ ಮತ್ತು ಹೊರಗೆ ಸತ್ಯದೊಂದಿಗೆ ಪ್ರದರ್ಶಿಸಬೇಕು ಎಂದು ನಾನು ಕೋರುತ್ತೇನೆ’ ಎಂದು ಟ್ವೀಟ್ ಮಾಡಿದ್ದರು.

ಚೇತನ್ ಹೇಳಿಕೆ ಚರ್ಚೆಗೆ ಗ್ರಾಸವಾಗಿತ್ತು.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT