ಬೆಂಗಳೂರು: ನಗರದ ಪ್ರಸನ್ನ ಚಿತ್ರಮಂದಿರದಲ್ಲಿ ಗುರುವಾರ ‘ವಾಮನ’ ಚಿತ್ರದ ಟ್ರೈಲರ್ ಬಿಡುಗಡೆ ವೇಳೆ ಅಭಿಮಾನಿಗಳು ಕುರ್ಚಿಗಳು, ಕಿಟಕಿ ಬಾಗಿಲು ಹಾಗೂ ಗೇಟ್ಗಳನ್ನು ಮುರಿದು ಹಾನಿ ಮಾಡಿದ್ದಾರೆ.

ನಟ ಧನ್ವೀರ್ ಗೌಡ ನಟನೆಯ ‘ವಾಮನ’ ಚಿತ್ರದ ಟ್ರೈಲರ್ ಕುರಿತು ದರ್ಶನ್ ಮಾತನಾಡಿರುವ ವಿಡಿಯೊವನ್ನು ಪ್ರದರ್ಶಿಸಲಾಯಿತು. ‘ಡಿ ಬಾಸ್, ಡಿ ಬಾಸ್’ ಎಂದು ಘೋಷಣೆ ಕೂಗಿದರು. ಈ ವೇಳೆ ತಳ್ಳಾಟ, ನೂಕಾಟ ನಡೆಯಿತು. ವೀಕ್ಷಣೆಗೆ ಬಂದಿದ್ದ ದರ್ಶನ್ ಅಭಿಮಾನಿಗಳು ಬಾಲ್ಕನಿ ಹಾಗೂ ಸೆಕೆಂಡ್ ಕ್ಲಾಸ್ನಲ್ಲಿ ಕುರ್ಚಿಗಳನ್ನು ಮುರಿದು ಹಾಕಿದರು.

‘ಟ್ರೈಲರ್ ಬಿಡುಗಡೆಗೆ ದರ್ಶನ್ ಬರುತ್ತಾರೆ ಎಂಬ ಕಾರಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಬಂದಿದ್ದರು. ಆದರೆ, ದರ್ಶನ್ ಬರಲಿಲ್ಲ. ಇದರಿಂದ ಕೋಪಗೊಂಡ ಅಭಿಮಾನಿಗಳು ಕುರ್ಚಿ, ಕಿಟಕಿ ಬಾಗಿಲು ಹಾಗೂ ಗೇಟ್ಗಳನ್ನು ಮುರಿದು ಹಾಕಿದ್ದಾರೆ. ಸುಮ್ಮನಿರುವಂತೆ ಮನವಿ ಮಾಡಿದರೂ ಕೇಳಲಿಲ್ಲ. ಲಕ್ಷಾಂತರ ರೂಪಾಯಿ ನಷ್ಟವಾಗಿದೆ’ ಎಂದು ಚಿತ್ರಮಂದಿರದ ರಾಮಚಂದ್ರು ಬೇಸರ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.