ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಕೊಲೆ ಪ್ರಕರಣ: ನಟ ದರ್ಶನ್ ಬಂಧನ

Published 11 ಜೂನ್ 2024, 8:22 IST
Last Updated 11 ಜೂನ್ 2024, 8:22 IST
ಅಕ್ಷರ ಗಾತ್ರ

ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಅವರ ಆಪ್ತೆ ಪವಿತ್ರಾಗೌಡ, ಪಟ್ಟಣಗೆರೆಯ ನಿವಾಸಿ ವಿನಯ್ ಸೇರಿ ಹತ್ತು ಮಂದಿಯನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ಉಳಿದ ಏಳು ಮಂದಿಯ ಹೆಸರು ಇನ್ನಷ್ಟೇ ಗೊತ್ತಾಗಬೇಕಿದೆ.

ಶನಿವಾರ ಸಂಜೆ ಸುಮನಹಳ್ಳಿ ಬ್ರಿಡ್ಜ್ ಬಳಿ ಮೃತದೇಹ ಇದೆ ಎಂಬ ಮಾಹಿತಿ ಆಧರಿಸಿ ಪೊಲೀಸರು ಸ್ಥಳಕ್ಕೆ ತೆರಳಿದ್ದರು. ಅನುಮಾನ ಬಂದ ಮೇರೆಗೆ ಕೊಲೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದರು. ಶನಿವಾರ ಸಂಜೆ ನಾಲ್ವರು ಬಂದು ಶರಣಾಗಿದ್ದರು. ಅವರು ನೀಡಿದ ಮಾಹಿತಿ ಆಧರಿಸಿ 6 ಮಂದಿಯನ್ನು ಬಂಧಿಸಲಾಗಿತ್ತು. ಅವರಲ್ಲಿ ದರ್ಶನ್, ಪವಿತ್ರಾಗೌಡ ಅವರೂ ಸೇರಿದ್ದಾರೆ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT