ರಾಬರ್ಟ್ ಬಿಡುಗಡೆಗೆ ಮುನ್ನ ತಿಮ್ಮಪ್ಪನ ‘ದರ್ಶನ’

ಬೆಂಗಳೂರು: ಬಹು ನಿರೀಕ್ಷೆಯ ‘ರಾಬರ್ಟ್’ ಚಿತ್ರವು ತೆಲುಗಿನಲ್ಲಿ ಬಿಡುಗಡೆಯಾಗಲು ಹಾದಿ ಸುಗಮವಾದ ಬೆನ್ನಲ್ಲೇ, ನಟ ದರ್ಶನ್ ಬುಧವಾರ ತಿರುಪತಿಗೆ ಭೇಟಿ ನೀಡಿ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದಿದ್ದಾರೆ.
ನಿರ್ಮಾಪಕ ಉಮಾಪತಿ ಶ್ರೀನಿವಾಸಗೌಡ ಹಾಗೂ ಆಂಧ್ರ ಪ್ರದೇಶ ಮತ್ತು ತೆಲಂಗಾಣದಲ್ಲಿ ಚಿತ್ರದ ವಿತರಕರ ಜೊತೆಗೂಡಿ ದರ್ಶನ್ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಮಾರ್ಚ್ 11ರಂದೇ ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತೆಲಂಗಾಣದಲ್ಲಿ ರಾಬರ್ಟ್ ಬಿಡುಗಡೆಯಾಗಲಿದೆ.
ರಾಬರ್ಟ್ ಬಿಡುಗಡೆ ಹಿನ್ನೆಲೆಯಲ್ಲೇ ತಿಮ್ಮಪ್ಪನ ದರ್ಶನ ಪಡೆದು, ಚಿತ್ರ ಯಶಸ್ವಿಯಾಗಲೆಂದು ಕೋರಿದ್ದೇವೆ. ತೆಲುಗಿನಲ್ಲಿ ಚಿತ್ರ ಬಿಡುಗಡೆಗೆ ಮೊದಲು ಅಡೆತಡೆಗಳಿತ್ತು. ಇದೀಗ ಅದೆಲ್ಲ ನಿವಾರಣೆಯಾಗಿ, ಸಕಾರಾತ್ಮಕವಾದ ವಾತಾವರಣವಿದೆ. ಚಿತ್ರದ ತೆಲುಗು ಟೀಸರ್ಗೆ ಉತ್ತಮ ಸ್ಪಂದನೆ ದೊರಕಿದೆ. ಚಿತ್ರ ಬಿಡುಗಡೆಗೆ ಇನ್ನೆರಡು ವಾರಗಳು ಇರುವಾಗ ಆಂಧ್ರ ಮತ್ತು ತೆಲಂಗಾಣದಲ್ಲಿ ಎಷ್ಟು ಚಿತ್ರಮಂದಿರಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎನ್ನುವ ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ಉಮಾಪತಿ ಶ್ರೀನಿವಾಸಗೌಡ ತಿಳಿಸಿದರು.
ಮಾ.11ರಂದು ತೆಲುಗಿನ ಎರಡು ಚಿತ್ರಗಳು ಬಿಡುಗಡೆಯಾಗುತ್ತಿರುವ ಕಾರಣಕ್ಕೆ ತೆಲುಗು ಆವೃತ್ತಿಯ ‘ರಾಬರ್ಟ್’ ಚಿತ್ರ ಬಿಡುಗಡೆಗೆ ಈ ಹಿಂದೆ ಅಡ್ಡಿ ಉಂಟಾಗಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.