ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದರ್ಶನ್‌ಗೆ ದೊಡ್ಡ ಅಭಿಮಾನಿ ಬಳಗ ಇದೆ ಎಂದು ಬಿಂಬಿಸಲಾಗಿದೆ: ನಟಿ ರಮ್ಯಾ

ಪೊಲೀಸ್ ಠಾಣೆ ಮುಂದೆ ಜನ ನಿಂತ ಮಾತ್ರಕ್ಕೆ ಆತ ಅಷ್ಟು ಪ್ರಭಾವ ಹೊಂದಿದ್ದಾನೆ ಎನ್ನಲಾಗುವುದಿಲ್ಲ.
Published 15 ಜೂನ್ 2024, 6:17 IST
Last Updated 15 ಜೂನ್ 2024, 6:17 IST
ಅಕ್ಷರ ಗಾತ್ರ

ನವದೆಹಲಿ: ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ತೂಗುದೀಪ ಮತ್ತು ಅವರ ಅಭಿಮಾನಿಗಳ ವಿರುದ್ಧ ಕಿಡಿಕಾರಿರುವ ನಟಿ ರಮ್ಯಾ, ದರ್ಶನ್‌ಗೆ ದೊಡ್ಡ ಅಭಿಮಾನಿಗಳ ಬಳಗವಿದೆ ಎಂಬಂತೆ ಬಿಂಬಿಸಲಾಗಿದೆ ವಿನಃ ಅದು ನಿಜವಲ್ಲ ಎಂದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿ ವಾಹಿನಿಯೊಂದಿಗೆ ಮಾತನಾಡಿದ ರಮ್ಯಾ, ‘ಆತನಿಗೆ ಸಿಕ್ಕಿರುವ ಜನಪ್ರಿಯತೆ ನೆತ್ತಿಗೇರಿದೆ. ಪದೇ ಪದೇ ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುವುದು ಸಾಮಾನ್ಯ ಎಂಬಂತಾಗಿದೆ’ ಎಂದಿದ್ದಾರೆ.

‘ಹಿಂದೆಯೂ ಅವರು ತಪ್ಪು ಮಾಡಿದ್ದರು. ಆದರೆ, ಪದೇ ಪದೇ ಇಂತಹ ತಪ್ಪುಗಳನ್ನು ಮಾಡುತ್ತಾರೆ ಎಂದು ಅಂದುಕೊಂಡಿರಲಿಲ್ಲ’ ಎಂದರು.

ದರ್ಶನ್ ಅಭಿಮಾನಿ ಬಳಗದ ಬಗ್ಗೆ ಮಾತನಾಡಿದ ರಮ್ಯಾ, ‘ಕಳೆದ ಚುನಾವಣೆಯಲ್ಲಿ ಒಂದೆರಡು ಅಭ್ಯರ್ಥಿಗಳ ಪರ ದರ್ಶನ್ ಪ್ರಚಾರ ಮಾಡಿದ್ದರು, ಅವರೆಲ್ಲರೂ ಚುನಾವಣೆಯಲ್ಲಿ ಸೋತಿದ್ದರು. ದರ್ಶನ್ ಅಭಿಮಾನಿಗಳ ಬಳಗದ ಕುರಿತಂತೆ ಹೈಪ್ ಮಾಡಲಾಗುತ್ತಿದೆ. ಪೊಲೀಸ್ ಠಾಣೆಯ ಮುಂದೆ ಜನ ನಿಂತಿದ್ದಾರೆ ಎಂದ ಮಾತ್ರಕ್ಕೆ ಆತ ಅಷ್ಟು ಪ್ರಭಾವ ಹೊಂದಿದ್ದಾನೆ ಎಂದು ಹೇಳಲು ಆಗುವುದಿಲ್ಲ’ ಎಂದು ಹೇಳಿದರು.

‘ದರ್ಶನ್‌ ಸುತ್ತಮುತ್ತ ಇರುವವರಲ್ಲಿ ಹೆಚ್ಚಿನವರು ನಟೋರಿಯಸ್‌ ರೌಡಿಗಳ ಗುಣಗಳನ್ನು ಹೊಂದಿದ್ದು, ಅದರಿಂದಲೇ ದರ್ಶನ್ ಗಮನ ಸೆಳೆಯುತ್ತಿದ್ದಾರೆ’ ಎಂದರು.

ಇದಕ್ಕೂ ಮುನ್ನ ದರ್ಶನ್ ಬಂಧನಕ್ಕೆ ಸಂಬಂಧಿಸಿದಂತೆ ಎಕ್ಸ್‌ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ರಮ್ಯಾ, ಕರ್ನಾಟಕ ಪೊಲೀಸರಿಗೆ ಧನ್ಯವಾದ ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT