ಗುರುವಾರ , ಆಗಸ್ಟ್ 18, 2022
27 °C

ನಟ ದಿಗಂತ್‌ಗೆ ಗೋವಾದಲ್ಲಿ ಬ್ಯಾಕ್ ಫ್ಲಿಪ್ ಮಾಡುವ ವೇಳೆ ಗಾಯ, ಶಸ್ತ್ರಚಿಕಿತ್ಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಗೋವಾದಲ್ಲಿ ಬ್ಯಾಕ್ ಫ್ಲಿಪ್ ಮಾಡುವ ವೇಳೆ ಗಾಯಗೊಂಡಿದ್ದ ನಟ ದಿಗಂತ್ ಅವರಿಗೆ ಇಲ್ಲಿನ ಮಣಿಪಾಲ್ ಆಸ್ಪತ್ರೆಯ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. 

ಅವರನ್ನು ಗೋವಾದಿಂದ ಹೆಲಿಕಾಪ್ಟರ್‌ ಮೂಲಕ ಇಲ್ಲಿಗೆ ಸಂಜೆ 4.30ರ ವೇಳೆಗೆ ಕರೆತರಲಾಯಿತು. ಕುತ್ತಿಗೆ ಭಾಗದಲ್ಲಿ ಅವರಿಗೆ ಬಲವಾದ ಪೆಟ್ಟು ಬಿದ್ದಿತ್ತು. ಬೆನ್ನುಮೂಳೆ ಶಸ್ತ್ರಚಿಕಿತ್ಸೆ ವಿಭಾಗದ ಮುಖ್ಯಸ್ಥ ಡಾ.ಎಸ್. ವಿದ್ಯಾಧರ್ ನೇತೃತ್ವದ ವೈದ್ಯರ ತಂಡವು ತಪಾಸಣೆ ನಡೆಸಿ, ಶಸ್ತ್ರಚಿಕಿತ್ಸೆಗೆ ಒಳಪಡಿಸಿತು. 

‘ದಿಗಂತ್ ಅವರ ಆರೋಗ್ಯದ ಸ್ಥಿತಿಯ ಬಗ್ಗೆ ಮೌಲ್ಯಮಾಪನ ಮಾಡಲಾಗುತ್ತಿದೆ. ಅವರು ವೇಗವಾಗಿ ಚೇತರಿಸಿಕೊಳ್ಳಲು ವೈದ್ಯರು ಅಗತ್ಯ ಕಾಳಜಿ ವಹಿಸಿದ್ದಾರೆ’ ಎಂದು ಆಸ್ಪತ್ರೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು