ಬೆಂಗಳೂರು: ಚಂದನವನದ ನಟ, ನಿರ್ಮಾಪಕ ದಿಲೀಪ್ ರಾಜ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. 2005ರಲ್ಲಿ ಬಾಯ್ಫ್ರೆಂಡ್ ಸಿನಿಮಾ ಮೂಲಕ ಬೆಳ್ಳಿ ತೆರೆಗೆ ಪರಿಚಿತರಾಗಿದ್ದ ಅವರು, 2026ರಲ್ಲಿ ಬಿಡುಗಡೆಯಾದ ಲವ್ ಮಾಕ್ಟೇಲ್ 3ವರೆಗೆ 24 ಸಿನಿಮಾಗಳಲ್ಲಿ ನಟಿಸಿದ್ದಾರೆ.

ಬೆಳ್ಳಿತೆರೆ ಮಾತ್ರವಲ್ಲದೆ ಕಿರುತೆರೆಯಲ್ಲಿಯೂ ಹೆಸರು ಮಾಡಿದ್ದ ದಿಲೀಪ್ ಅವರು ಕುಂಕುಮ ಭಾಗ್ಯ, ಜನನಿ, ರಥಸಪ್ತಮಿ, ಪಾರು, ಹಿಟ್ಲರ್ ಕಲ್ಯಾಣ ಸೇರಿದಂತೆ 12ಕ್ಕೂ ಹೆಚ್ಚು ಧಾರಾವಾಹಿಗಳಲ್ಲಿ ನಟಿಸಿದ್ದಾರೆ.

ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಹಿಟ್ಲರ್ ಕಲ್ಯಾಣ ಧಾರಾವಾಹಿ ದಿಲೀಪ್ ಅವರಿಗೆ ದೊಡ್ಡ ಮಟ್ಟದ ಯಶಸ್ಸು ತಂದುಕೊಟ್ಟಿತ್ತು. ಎಜೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ದಿಲೀಪ್ ಅವರು ನಟಿ ಮಲೈಕಾ ವಸುಪಾಲ್ ಅವರೊಂದಿಗೆ ತೆರೆಹಂಚಿಕೊಂಡಿದ್ದರು.
.ಸ್ಯಾಂಡಲ್ವುಡ್ ನಟ ದಿಲೀಪ್ ರಾಜ್ ನಿಧನ.
ಇತ್ತೀಚೆಗೆ ಪತ್ನಿಯೊಂದಿಗೆ ಯುರೋಪ್ ಪ್ರವಾಸ ಕೈಗೊಂಡಿದ್ದ ದಿಲೀಪ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಅನೇಕ ಫೋಟೊಗಳನ್ನು ಹಂಚಿಕೊಂಡಿದ್ದರು.

ಕಂಬನಿ ಮಿಡಿದ ಚಿತ್ರರಂಗ

ದಿಲೀಪ್ ರಾಜ್ ಅವರ ನಿಧನಕ್ಕೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ.

ಸಂತಾಪ ಸೂಚಿಸಿ ಪೋಸ್ಟ್ ಹಂಚಿಕೊಂಡಿರುವ ನಟ, ನಿರ್ದೇಶಕ ರಿಷಬ್ ಶೆಟ್ಟಿ, ‘ಒಳ್ಳೆಯ ನಿರ್ದೇಶಕ, ನಿರ್ಮಾಪಕ ಎಲ್ಲದಕ್ಕೂ ಮಿಗಿಲಾಗಿ ಒಬ್ಬ ಒಳ್ಳೆಯ ಮನುಷ್ಯ. ಭೇಟಿಯಾದ ಸಂದರ್ಭಗಳು ಬೆರಳೆಣಿಕೆಯಷ್ಟಾದರೂ ಮನಸ್ಸಿನಲ್ಲಿ ಕೂತ ವ್ಯಕ್ತಿತ್ವದ ಭಾವ ಮಾಸಿಹೋಗಲಾರದು. ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಬರೆದುಕೊಂಡಿದ್ದಾರೆ.

ದಿಲೀಪ್ ನಿಧನದ ಬಗ್ಗೆ ಕಂಬನಿ ಮಿಡಿದ ಸಿಹಿಕಹಿ ಚಂದ್ರು ಅವರು, ‘ಇಂದು ಬೇಸರ ದಿನ. ಒಬ್ಬ ಒಳ್ಳೆಯ ಸ್ನೇಹಿತನನ್ನು ಕಳೆದುಕೊಂಡೆ, ದಿಲೀಪ್ ಅವರನ್ನು ಮಿಸ್ ಮಾಡಿಕೊಳ್ಳುತ್ತೇನೆ’ ಎಂದಿದ್ದಾರೆ. ಮಿಲನ ಸಿನಿಮಾದಲ್ಲಿ ದಿಲೀಪ್ ಜೊತೆ ಸಿಹಿಕಹಿ ಚಂದ್ರು ನಟಿಸಿದ್ದರು.

ದಿಲೀಪ್ ಅವರನ್ನು ಭೇಟಿ ಮಾಡಿದ ಸಂದರ್ಭ ನೆನೆದು ಪೋಸ್ಟ್ ಹಂಚಿಕೊಂಡಿರುವ ಚೇತನ್ ಅಹಿಂಸಾ, ' 2009ರಲ್ಲಿ ದಿಲೀಪ್ ಅವರ ಜೊತೆ ಗೋವಾದಲ್ಲಿ ಹಾಡೊಂದರ ಚಿತ್ರೀಕರಣದಲ್ಲಿ ಕೆಲಸ ಮಾಡಿದ್ದೆ. ಸೃಜನಶೀಲ ವ್ಯಕ್ತಿಯಾಗಿದ್ದರು. ಡಬ್ಬಿಂಗ್ ಕಲಾವಿದನಾಗಿ ನನ್ನ ಪಾತ್ರಗಳಿಗೆ ಜೀವ ತುಂಬಿದ್ದರು. ಅವರನ್ನು ಸದಾ ನೆನಪಿಸಿಕೊಳ್ಳುತ್ತೇನೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.