ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲಯಾಳಂ ನಟ ಜಾಯ್‌ ಮ್ಯಾಥ್ಯೂ ಕಾರು ಅಪಘಾತ: ನಟನಿಗೆ ಗಾಯ

Published 5 ಸೆಪ್ಟೆಂಬರ್ 2023, 7:27 IST
Last Updated 5 ಸೆಪ್ಟೆಂಬರ್ 2023, 7:27 IST
ಅಕ್ಷರ ಗಾತ್ರ

ತ್ರಿಶೂರ್‌: ಇಲ್ಲಿನ ಚಾವಕ್ಕಾಡ್-ಪೊನ್ನಾನಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಮಲಯಾಳಂ ನಟ ಹಾಗೂ ನಿರ್ದೇಶಕ ಜಾಯ್‌ ಮ್ಯಾಥ್ಯೂ ಗಾಯಗೊಂಡಿದ್ದಾರೆ.

ಜಾಯ್‌ ಮ್ಯಾಥ್ಯೂ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಸೋಮವಾರ ತಡ ರಾತ್ರಿ ಮಂಡಲಂಕುಣ್ಣು ಬಳಿ ಈ ಅಪಘಾತ ಸಂಭವಿಸಿದೆ. ಜಾಯ್ ಮ್ಯಾಥ್ಯೂ ಅವರ ಮೂಗಿಗೆ ಗಾಯವಾಗಿದ್ದರಿಂದ ಅವರನ್ನು ಚಾವಕ್ಕಾಡ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಾಯ್‌ ಮ್ಯಾಥ್ಯೂ ಅವರು ಎರ್ನಾಕುಲಂಗೆ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT