ಇದಕ್ಕೂ ಮುನ್ನ ಸಮಾಧಿ ದರ್ಶನಕ್ಕೆ ಅವಕಾಶ ಸಿಗದೆ ಪ್ರತಿಭಟನೆ ನಡೆದು ಗದ್ದಲ ಉಂಟಾಯಿತು. ಕೆಂಗೇರಿಯಲ್ಲಿರುವ ಅಭಿಮಾನ್ ಸ್ಟುಡಿಯೊ ಹೊರಗೆ ವಿಷ್ಣುವರ್ಧನ್ ಪುಣ್ಯಭೂಮಿ ಟ್ರಸ್ಟ್ ವತಿಯಿಂದ ಅನ್ನದಾನ, ರಕ್ತದಾನ ಶಿಬಿರ, ಇತರೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸ್ಟುಡಿಯೊ ಹೊರಭಾಗದ ಕಾರ್ಯಕ್ರಮಕ್ಕೆ ಮಾತ್ರ ಜಿಲ್ಲಾಧಿಕಾರಿ ಅನುಮತಿ ನೀಡಿದ್ದರು. ಆದ್ದರಿಂದ, ಸಮಾಧಿಗೆ ಪೂಜೆ ಸಲ್ಲಿಸದಂತೆ ಸ್ಟುಡಿಯೊದ ಸಿಬ್ಬಂದಿ ತಡೆಯೊಡ್ಡಿ ಗೇಟ್ ಬೀಗ ಹಾಕಿದರು. ಇದರಿಂದ ಆಕ್ರೋಶಗೊಂಡ ಅಭಿಮಾನಿಗಳು ಸ್ಮಾರಕದ ಗೇಟ್ ಬಳಿ ಪ್ರತಿಭಟನೆಗೆ ಮುಂದಾದರು. ಪೊಲೀಸರ ಮಧ್ಯಪ್ರವೇಶದಿಂದ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಿದ ನಂತರ ವಾತಾವರಣ ತಿಳಿಗೊಂಡಿತು.