‘ಗಿಮಿಕ್’ ಸಿನಿಮಾದಿಂದ ಬರುವ ಲಾಭದಲ್ಲಿ ಶೇಕಡ 1ರಷ್ಟು ಹಣವನ್ನು ರಾಜ್ಯದಲ್ಲಿ ನೆರೆಯಿಂದ ಸಂತ್ರಸ್ತರಾಗಿರುವ ಕುಟುಂಬಗಳಿಗೆ ನೀಡಲು ಚಿತ್ರತಂಡ ನಿರ್ಧರಿಸಿದೆ.

‘ಗೋಲ್ಡನ್ ಸ್ಟಾರ್’ ಗಣೇಶ್ ನಾಯಕ ನಟನಾಗಿರುವ ‘ಗಿಮಿಕ್’ ಸಿನಿಮಾ ಆಗಸ್ಟ್ 15ರಂದು ತೆರೆಗೆ ಬರುತ್ತಿದೆ. ಗಣೇಶ್ ಮೊದಲ ಬಾರಿಗೆ ನಟಿಸಿರುವ ಹಾರರ್ ಚಿತ್ರ ಇದು. ಈ ಬಗ್ಗೆ ಮಾಹಿತಿ ನೀಡಲು ಚಿತ್ರತಂಡ ಸುದ್ದಿಗೋಷ್ಠಿಗೆ ಹಾಜರಾಗಿತ್ತು.

ನಟ ಗಣೇಶ್ ಮಾತನಾಡಿ, ‘ಪ್ರವಾಹದಿಂದ ರಾಜ್ಯದ ಜನರು ದಿಕ್ಕೆಟ್ಟಿದ್ದಾರೆ. ಅವರ ಬದುಕನ್ನು ಮರುಸೃಷ್ಟಿಸಲು ಸಾಧ್ಯವಾಗದಂತಹ ಸ್ಥಿತಿ ನಿರ್ಮಾಣವಾಗಿದೆ. ಸಂತ್ರಸ್ತರ ನೆರವಿಗೆ ಎಲ್ಲರೂ ಕೈಜೋಡಿಸಬೇಕಿದೆ. ಸ್ವಯಂಸೇವಕರು, ರಾಷ್ಟ್ರೀಯ ವಿಪತ್ತು ಪರಿಹಾರ ಪಡೆಯ ಸಿಬ್ಬಂದಿ ಸಂತ್ರಸ್ತರ ರಕ್ಷಣೆಯಲ್ಲಿ ತೊಡಗಿದ್ದಾರೆ. ಸಾಮಾಜಿಕ ಜಾಲ ತಾಣದಲ್ಲಿ ನನ್ನ ಮನವಿಗೆ ಅಭಿಮಾನಿಗಳೂ ಸ್ಪಂದಿಸಿದ್ದಾರೆ. ಎಲ್ಲರಿಗೂ ನಾನು ಆಭಾರಿಯಾಗಿದ್ದೇನೆ’ ಎಂದರು.

‘ಸರ್ಕಾರ ಸಂತ್ರಸ್ತರ ನೆರವಿಗೆ ಮುಂದಾಗಿದೆ. ನೊಂದವರ ನೋವಿಗೆ ಸ್ಪಂದಿಸುವುದು ಎಲ್ಲರ ಜವಾಬ್ದಾರಿ. ಹಾಗಾಗಿ, ‘ಗಿಮಿಕ್’ ಚಿತ್ರದಿಂದ ಬರುವ ಲಾಭದಲ್ಲಿ ಸ್ವಲ್ಪ ಪಾಲನ್ನು ಸಂತ್ರಸ್ತರಿಗೆ ನೀಡಲು ತೀರ್ಮಾನಿಸಲಾಗಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.