ಮುಂಬೈ: ಬಾಲಿವುಡ್ ನಟ ಹಾಗೂ ಶಿವಸೇನಾ ನಾಯಕ ಗೋವಿಂದ ಅವರ ಕಾಲಿಗೆ ಆಕಸ್ಮಿಕವಾಗಿ ಗುಂಡು ತಗುಲಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಾಲಿಗೆ ಗುಂಡು ತಗುಲಿದ ಘಟನೆ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.
ಅವರ ಪಿಸ್ತೂಲ್‌ನಿಂದಲೇ ಆಕಸ್ಮಿಕವಾಗಿ ಕಾಲಿಗೆ ಗುಂಡು ತಗುಲಿದೆ ಎಂದು ಮುಂಬೈನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಅವರು ಹೇಳಿದರು.