ಗುರುವಾರ , ಮಾರ್ಚ್ 30, 2023
24 °C

ಜಗ್ಗೇಶ್‌ ಜನ್ಮದಿನ: ಸಿಎಂ ಸೇರಿ ಹಲವು ಗಣ್ಯರಿಂದ ಶುಭ ಹಾರೈಕೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವರಸ ನಾಯಕ ಜಗ್ಗೇಶ್‌ ಜನ್ಮದಿನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಶುಭ ಹಾರೈಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಸಿಎಂ ಬೊಮ್ಮಾಯಿ, ಜನಪ್ರಿಯ ಚಿತ್ರನಟರು ಹಾಗೂ ರಾಜ್ಯಸಭಾ ಸದಸ್ಯರಾದ ಶ್ರೀ ಜಗ್ಗೇಶ್ ರವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಉತ್ತಮ ಆಯುರಾರೋಗ್ಯ ನೀಡಿ ಮತ್ತಷ್ಟು ಜನಸೇವೆ ಮಾಡುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ನಟ ರಕ್ಷಿತ್‌ ಶೆಟ್ಟಿ ಸೇರಿದಂತೆ ಕನ್ನಡ ಚಿತ್ರರಂಗದ ಅನೇಕರು ಹಾಸ್ಯ ನಟನಿಗೆ ಜನ್ಮ ದಿನದ ಶುಭ ಕೋರಿ ಟ್ವೀಟ್‌ ಮಾಡಿದ್ದಾರೆ. 

ಇತ್ತೀಚೆಗಷ್ಟೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಜಗ್ಗೇಶ್‌ ಭೇಟಿ ಮಾಡಿದ್ದರು. ನನ್ನ ಬದುಕಿನ ಶ್ರೇಷ್ಠದಿನ ಇಂದು. ಮಾ.17 ನನ್ನ ಹುಟ್ಟುದಿನ. ಈ ವರ್ಷ ನನಗೆ 60ನೇ ವಸಂತ. ನನ್ನ ನೆಚ್ಚಿನ ಪ್ರಧಾನಿಗಳು ನನ್ನ ಹಾಗು ಹೆಂಡತಿ ಮಗನನ್ನು ಮನತುಂಬಿ ಹರಸಿದರು. ಅವರಿಗೆ ನನ್ನ ಗುರುಗಳು ರಾಯರ ವಿಗ್ರಹ ಸಮರ್ಪಿಸಿದೆ ಎಂದು ಜಗ್ಗೇಶ್‌ ಟ್ವೀಟ್‌ ಮಾಡಿದ್ದರು. ಪ್ರಧಾನಿ ಮೋದಿ ಅವರಿಗೆ ರಾಯರ ವಿಗ್ರಹ ಸಮರ್ಪಿಸುತ್ತಿರುವ ಚಿತ್ರವನ್ನು ಹಂಚಿಕೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು