ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ ರಾಜ್ಯಪಾಲರನ್ನು ಭೇಟಿ ಮಾಡಲಿರುವ ನಟಿ ಕಂಗನಾ ರನೌತ್ 

Last Updated 13 ಸೆಪ್ಟೆಂಬರ್ 2020, 3:32 IST
ಅಕ್ಷರ ಗಾತ್ರ

ಮುಂಬೈ: ಶಿವಸೇನಾ ನಾಯಕರು ಮತ್ತು ನಟಿ ಕಂಗನಾ ರನೌತ್ ನಡುವಿನ ವಾಕ್ಸಮರ ತಾರಕ್ಕೇರಿರುವ ಬೆನ್ನಲ್ಲೇ ಕಂಗನಾ ಅವರಿಂದು ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರನ್ನು ಭೇಟಿ ಮಾಡಲಿದ್ದಾರೆ.

ಹಿಮಾಚಲ ಪ್ರದೇಶದ ತನ್ನ ಊರಿಗೆ ತೆರಳುವ ಮುನ್ನ ಸಂಜೆ 4.30ಕ್ಕೆ ಮುಂಬೈನ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ಚರ್ಚಿಸಲಿದ್ದು,ಸಭೆ ನಿಗದಿಯಾಗಿದೆ.

ನಟಿ ಮಹಾರಾಷ್ಟ್ರ ಸರ್ಕಾರವನ್ನು, ವಿಶೇಷವಾಗಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಟೀಕಿಸಿದ್ದಾರೆ. ಶಿವಸೇನೆ ಮುಖಂಡ ಸಂಜಯ್ ರಾವುತ್ ಅವರೊಂದಿಗಿನ ವಾದದಿಂದಾಗಿಯೇ ಮುಂಬೈನ ಪಾಲಿ ಹಿಲ್ ಪ್ರದೇಶದಲ್ಲಿನ ಕಂಗನಾರ ಕಚೇರಿಯ ಕೆಲಭಾಗಗಳನ್ನು ಬಿಎಂಸಿ ನೆಲಸಮಗೊಳಿಸಲು ಕಾರಣ ಎಂದು ಚರ್ಚೆಯಾಗಿದೆ.

ಮಹಾರಾಷ್ಟ್ರ ರಾಜ್ಯಪಾಲರ ಭೇಟಿಯ ಹಿಂದಿನ ಉದ್ಧೇಶವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ನಟ ಸುಶಾಂತ್ ಸಿಂಗ್ ರಜಪೂತ್ ಅವರ ನಿಧನದ ನಂತರ ಮುಂಬೈನಲ್ಲಿ ಅಸುರಕ್ಷಿತ ಭಾವನೆ ಹೊಂದಿದ್ದೇನೆ ಎಂದು ಕಂಗನಾ ಹೇಳಿದ್ದರು. ಇದಕ್ಕೆ ಶಿವಸೇನಾ ಮುಖಂಡರು ಪಕ್ಷದ ಮುಖವಾಣಿ ಸಾಮ್ನಾದಲ್ಲಿ ತೀವ್ರವಾಗಿ ಪ್ರತಿಕ್ರಿಯಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಕಂಗನಾ, 'ಶಿವಸೇನಾ ನಾಯಕ ಸಂಜಯ್‌ ರಾವುತ್ ನನಗೆ ಬಹಿರಂಗವಾಗಿ ಬೆದರಿಕೆ ಹಾಕಿದ್ದಾರೆ ಎಂದಿದ್ದರು.

'ಮುಂಬೈ ನಗರ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಂತೆ ಭಾಸವಾಗುತ್ತಿದೆ.ಮುಂಬೈ ಪೊಲೀಸರ ಉಸ್ತುವಾರಿಯಲ್ಲಿರಲು ನನಗೆ ಭಯವಾಗುತ್ತಿದೆ' ಎಂದು ಕಂಗನಾ ಟ್ವೀಟ್ ಮಾಡಿದ್ದರು.

ಇದಾದ ಬಳಿಕ ಶಿವಸೇನಾ ಮತ್ತು ಕಂಗನಾ ನಡುವೆ ವಾಕ್ಸಮರ ಆರಂಭವಾಗಿತ್ತು. ಈ ಮಧ್ಯೆ ತನ್ನ ಸುರಕ್ಷತೆಯ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಲ್ಲಿ ಕಳವಳ ವ್ಯಕ್ತಪಡಿಸಿದ ನಂತರ ಕೇಂದ್ರ ಗೃಹ ಸಚಿವಾಲಯವು ವೈ+ ಶ್ರೇಣಿಯ ಭದ್ರತೆಯನ್ನು ಒದಗಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT