ಗಿರೀಶ್ ಮೂಲಿಮನಿ ಈ ಸಿನಿಮಾಗೆ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ. ಈ ಹಿಂದೆ ಗಿರೀಶ್ ‘ರಾಜರು’ ಎಂಬ ಚಿತ್ರ ಮಾಡಿದ್ದರು. ಎಂ. ಮುನೇಗೌಡ ತಮ್ಮದೇ ಎಸ್‌ವಿಸಿ ಫಿಲ್ಮಂಸ್ ಪ್ರೊಡಕ್ಷನ್‌ನಡಿ ‘ಭುವನಂ ಗಗನಂ’ಗೆ ಹಣ ಹಾಕಿದ್ದಾರೆ. ಸಿನಿಮಾ ಲವ್, ರೋಮ್ಯಾನ್ಸ್, ಫ್ಯಾಮಿಲಿ ಎಮೋಷನ್ ಕಥಾಹಂದರ ಹೊಂದಿದ್ದು, ನಗರ, ಹಳ್ಳಿ ಹೀಗೆ ಎರಡು ಬ್ಯಾಕ್‌ಡ್ರಾಪ್‌ನಲ್ಲಿ ನಡೆಯುವ ಕಥೆಯಾಗಿದೆ. ಪ್ರಮೋದ್‌ಗೆ ಜೋಡಿಯಾಗಿ ‘ಲವ್ ಮಾಕ್ಟೇಲ್’ ಖ್ಯಾತಿಯ ರೆಚೆಲ್ ಡೇವಿಡ್, ಪೃಥ್ವಿಗೆ ಜೋಡಿಯಾಗಿ ಅಶ್ವಥಿ ನಟಿಸ್ತಿದ್ದಾರೆ. ಅಚ್ಯುತ್ ಕುಮಾರ್, ಶರತ್ ಲೋಹಿತಾಶ್ವ, ಪ್ರಕಾಶ್ ತುಮ್ಮಿನಾಡು, ಸಿದ್ಲಿಂಗು ಶ್ರೀಧರ್, ಹರಿಣಿ, ಸ್ಪರ್ಶ ರೇಖಾ, ಪ್ರಜ್ವಲ್ ಶೆಟ್ಟಿ, ಚೇತನ್ ದುರ್ಗ ತಾರಾಬಳಗದಲ್ಲಿದ್ದಾರೆ. ಉದಯ್ ಲೀಲಾ ಛಾಯಾಚಿತ್ರಗ್ರಹಣ, ಸುನೀಲ್ ಕಶ್ಯಪ್ ಸಂಕಲನ ಸಿನಿಮಾಕ್ಕಿದೆ.