ಶೀಘ್ರದಲ್ಲೇ ಸಿನಿಮಾ ತೆರೆಕಾಣಲಿದೆ. ಈ ಚಿತ್ರದಲ್ಲಿ ಕೋಮಲ್ ಮೊದಲ ಬಾರಿಗೆ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿರುವುದು ವಿಶೇಷ. ದತ್ತಣ್ಣ, ಸಾಧು ಕೋಕಿಲ, ಮಿತ್ರ, ಸುಚೇಂದ್ರ ಪ್ರಸಾದ್, ಶಿವರಾಜ್ ಕೆ.ಆರ್. ಪೇಟೆ, ತಬಲಾ ನಾಣಿ, ರಾಜು ತಾಳಿಕೋಟೆ, ಸುಮನ್ ನಗರ್‌ಕರ್, ಮಾನಸಿ ಸುಧೀರ್, ಯತಿರಾಜ್ ಜಗ್ಗೇಶ್, ಜಯಸಿಂಹ ಮುಸುರಿ, ರಘು ರಾಮನಕೊಪ್ಪ, ಮಹಾಂತೇಶ್, ಜಯರಾಮ್ ಸೇರಿದಂತೆ ದೊಡ್ಡ ತಾರಾಬಳಗವೇ ಚಿತ್ರದಲ್ಲಿದೆ. ಚಿತ್ರದ ನಾಯಕಿಯರಾಗಿ ನಿಸರ್ಗ ಅಪ್ಪಣ್ಣ ಮತ್ತು ‘ಗಿಚ್ಚಿಗಿಲಿಗಿಲಿ’ಯ ಅಮೃತಾ ಬಣ್ಣ ಹಚ್ಚಿದ್ದಾರೆ. ವಜ್ರಮುನಿ ಅವರ ಮೊಮ್ಮೊಗ ಆಕರ್ಷ್ ಈ ಚಿತ್ರದ ಮೂಲಕ ಚಂದನವನ ಪ್ರವೇಶಿಸುತ್ತಿದ್ದಾರೆ. ಮಯೂರ್ ಪಟೇಲ್ ಖಳನಾಯಕನಾಗಿ ನಟಿಸಿದ್ದಾರೆ.