ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜವಾನ್‌ ಚಿತ್ರಕ್ಕೆ ಶುಭ ಕೋರಿದ ನಟ ಮಹೇಶ್‌ ಬಾಬು

Published 6 ಸೆಪ್ಟೆಂಬರ್ 2023, 7:48 IST
Last Updated 6 ಸೆಪ್ಟೆಂಬರ್ 2023, 7:48 IST
ಅಕ್ಷರ ಗಾತ್ರ

ಬೆಂಗಳೂರು: ಬಾಲಿವುಡ್‌ ಸೂಪರ್‌ ಸ್ಟಾರ್‌ ಶಾರುಖ್‌ ಖಾನ್‌ ಅಭಿನಯದ ಜವಾನ್‌ ಚಿತ್ರಕ್ಕೆ ನಟ ಮಹೇಶ್‌ ಬಾಬು ಶುಭಾಶಯ ಕೋರಿದ್ದಾರೆ.

ಅಟ್ಲೀ ನಿರ್ದೇಶನ ‘ಜವಾನ್‘ ಚಿತ್ರ ನಾಳೆ (ಸೆಪ್ಟೆಂಬರ್‌ 7) ವಿಶ್ಚದಾದ್ಯಂತ ತೆರೆ ಮೇಲೆ ಬರಲಿದೆ.

ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಮಹೇಶ್‌ ಬಾಬು, ಇದೀಗ ಜವಾನ್‌ ಸಿನಿಮಾವನ್ನು ಕುಟುಂಬದೊಂದಿಗೆ ವೀಕ್ಷಿಸುವ ಸಮಯ. ಬಾಕ್ಸ್‌ ಆಫೀಸ್‌ ಗಳಿಕೆಯಲ್ಲಿ ದಾಖಲೆ ನಿರ್ಮಿಸಿ ಎಂದು ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಶಾರುಖ್‌, ’ ಧನ್ಯವಾದಗಳು ಗೆಳೆಯ. ನಿಮ್ಮೊಂದಿಗೆ ಜವಾನ್ ಚಿತ್ರ ನೋಡಲು ಬಯಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಜವಾನ್‌ ಚಿತ್ರದ ಒನ್‌ ಡೇ ಟು ಗೋ ( 1 day to go) ಹ್ಯಾಶ್‌ ಟ್ಯಾಗ್‌ ಹೆಚ್ಚು ಟ್ರೆಂಡ್‌ ಆಗಿದೆ.

ಪ್ಯಾನ್ ಇಂಡಿಯಾ ಸಿನಿಮಾ ‘ಜವಾನ್‘ ಅನ್ನು ಗೌರಿ ಖಾನ್‌ ನಿರ್ಮಾಣ ಮಾಡಿದ್ದಾರೆ. ಈ ಚಿತ್ರವು ಥ್ರಿಲ್ಲರ್‌ ಕಥಾಹಂದರವನ್ನು ಹೊಂದಿದೆ.

ವಿಜಯ್ ಸೇತುಪತಿ, ದೀಪಿಕಾ ಪಡುಕೋಣೆ, ಪ್ರಿಯಾಮಣಿ, ಸಾನ್ಯಾ ಮಲ್ಹೋತ್ರಾ, ಗಿರಿಜಾ ಓಕ್, ಸಂಜೀತಾ ಭಟ್ಟಾಚಾರ್ಯ, ಲೆಹರ್ ಖಾನ್, ಆಲಿಯಾ ಖುರೇಷಿ, ರಿಧಿ ಡೋಗ್ರಾ, ಸುನಿಲ್ ಗ್ರೋವರ್ ಮತ್ತು ಮುಖೇಶ್ ಛಾಬ್ರಾ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

‘ಜವಾನ್‘ ಚಿತ್ರವು ಹಿಂದಿ, ತೆಲುಗು ಮತ್ತು ತಮಿಳು ಭಾಷೆಗಳಲ್ಲಿ ತೆರೆ ಕಾಣಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT