ಗುರುವಾರ , ಡಿಸೆಂಬರ್ 1, 2022
27 °C

ನಟ ಮಹೇಶ್ ಬಾಬು ತಾಯಿ ಇಂದಿರಾ ದೇವಿ ನಿಧನ

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ಹೈದರಾಬಾದ್‌: ತೆಲುಗಿನ ಖ್ಯಾತ ನಟ ಮಹೇಶ್ ಬಾಬು ಅವರ ತಾಯಿ ಇಂದಿರಾ ದೇವಿ ನಿಧನರಾದರು. ಅವರಿಗೆ 70 ವರ್ಷ ವಯಸ್ಸಾಗಿತ್ತು.

ಹಲವು ದಿನಗಳಿಂದ ಇಂದಿರಾ ದೇವಿ ಅವರು ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಬುಧವಾರ ಬೆಳಗ್ಗೆ 4 ಗಂಟೆಗೆ ಇಂದಿರಾ ದೇವಿ ನಿಧನರಾದರು ಎಂದು ಮಹೇಶ್ ಬಾಬು ಕುಟುಂಬದವರು ತಿಳಿಸಿದ್ದಾರೆ.

ಅವರ ಅಗಲಿಕೆಗೆ ಆಪ್ತರು, ಗೆಳೆಯರು, ಸಿನಿಮಾ ಸೆಲೆಬ್ರಿಟಿಗಳು ಸೇರಿದಂತೆ ಮಹೇಶ್‌ ಬಾಬು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಮೂಲಕ ಸಂತಾಪ ಸೂಚಿಸುತ್ತಿದ್ದಾರೆ.
 
ಮಹೇಶ್ ಬಾಬು ತಂದೆ ಕೃಷ್ಣ ಅವರು 70– 80ರ ದಶಕದಲ್ಲಿ ತೆಲುಗು ಸಿನಿಮಾಗಳಲ್ಲಿ ಸೂಪರ್ ಸ್ಟಾರ್ ಆಗಿ ಮಿಂಚಿದ್ದರು. ಈ ವರ್ಷ ಆರಂಭದಲ್ಲಿ ಅವರ ಹಿರಿಯ ಪುತ್ರ ರಮೇಶ್ ಬಾಬು ಕೊನೆಯುಸಿರೆಳೆದಿದ್ದರು. ಈಗ ಕೃಷ್ಣ ಪತ್ನಿ ಇಂದಿರಾ ದೇವಿ ನಿಧನದಿಂದ ಇಡೀ ಕುಟುಂಬದಲ್ಲಿ ಶೋಕ ಆವರಿಸಿದೆ. ಅಭಿಮಾನಿಗಳು, ಸೆಲೆಬ್ರಿಟಿಗಳು ಮಹೇಶ್ ಬಾಬು ಕುಟುಂಬಕ್ಕೆ ಸಾಂತ್ವನ ಹೇಳುತ್ತಿದ್ದಾರೆ.

ಇಂದಿರಾ ದೇವಿ ಅವರ ಅಂತ್ಯಸಂಸ್ಕಾರ ಮಧ್ಯಾಹ್ನ 12 ಗಂಟೆ ನಂತರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು